ಬೆಂಗಳೂರು: ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುತ್ತೇನೆ ಎಂದು ಘೋಷಣೆ ಮಾಡಿದ ನಂತರ ದೇವೇಗೌಡ, ರೇವಣ್ಣ ಹಾಗೂ ಪ್ರಜ್ವಲ್ ಮೂರೂ ಜನ ಕಣ್ಣೀರು ಹಾಕಿರುವುದಕ್ಕೆ ಬಿಜೆಪಿ ಹಿಗ್ಗಾ ಮುಗ್ಗಾ ಜಾಡಿಸಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ! ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ! ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು! ರಾಜ್ಯದ ಜನ ಈಗಲೂ ಮರುಳಾಗುವರೇ? ಎಂದು ಪ್ರಶ್ನಿಸಿದೆ.
ರೈತರು ಆತ್ಮಹತ್ಯೆ ಮಾಡಿಕೊಂಡಾಗ ಅಳಲಿಲ್ಲ!
ಪುಲ್ವಾಮಾ ದಾಳಿಯಾಗಿ ಯೋಧರು ಮಡಿದಾಗ ಕಣ್ಣೀರು ಬರಲಿಲ್ಲ!
ಚುನಾವಣೆ ಬಂದಾಗ ಮಾತ್ರ ಮನೆಮಂದಿಗೆಲ್ಲ ವೇದಿಕೆಯಲ್ಲಿ ಕಣ್ಣೀರು!
ರಾಜ್ಯದ ಜನ ಈಗಲೂ ಮರುಳಾಗುವರೇ?
— BJP Karnataka (@BJP4Karnataka) March 13, 2019
ಮಾ.13 ರಂದು ಹೊಳೆನರಸೀಪುರದ ಮೂಡಲಹಿಪ್ಪೆ ಗ್ರಾಮದಿಂದ ಜೆಡಿಎಸ್ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಹಾಸನ ಲೋಕಸಭಾ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುವುದನ್ನು ಘೋಷಿಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವೇದಿಕೆ ಮೇಲೆ ಕಣ್ಣೀರು ಹಾಕಿದ್ದರು. ಇದೇ ವೇಳೆ ತಂದೆಯವರ ತ್ಯಾಗ ದೊಡ್ಡದು ಎಂದು ರೇವಣ್ಣ ಸಹ ಕಣ್ಣೀರು ಹಾಕಿದ್ದರು. ಇವರ ಹಿಂದೆಯೇ ಪ್ರಜ್ವಲ್ ರೇವಣ್ಣ ಸಹ ಕಣ್ಣೀರು ಹಾಕಿದ್ದು, ನಾಯಕರು ಎನಿಸಿಕೊಂಡ ಇವರ ಕಣ್ಣೀರು ಪ್ರಹಸನಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

















