Read - < 1 minute
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಬಹುದೊಡ್ಡ ಜಯವಾಗಿದೆ. ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದ್ದು, ಬರ ಪರಿಹಾರ ಸೇರಿದಂತೆ ತುರ್ತು ಕಾರ್ಯಗಳು ನಡೆಯಲಿವೆ ಎಂದಿದ್ದಾರೆ.
Discussion about this post