ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿಯಾಗಿದ್ದ ಡಾ.ಪಿ. ರವೀಂದ್ರನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತಂತೆ ಮುಖ್ಯಕಾರ್ಯದರ್ಶಿಯವರಿಗೆ ರಾಜೀನಾಮೆ ನೀಡಿರು ಅರು, ನಾಗರಿಕ ಹಕ್ಕಗಳ ಜಾರಿ ನಿರ್ದೇಶನಾಯಲದಿಂದ ಇತ್ತೀಚೆಗಷ್ಟೇ ತರಬೇತಿ ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ಸೋಮವಾರ ಅಧಿಕಾರ ವಹಿಸಿಕೊಂಡಿದ್ದ ಅವರು ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಸರ್ಕಾರದ ವರ್ಗಾವಣೆ ನೀತಿ ಹಾಗೂ ಅವಧಿಪೂರ್ವ ವರ್ಗಾವಣೆಯಿಂದ ಬೇಸತ್ತು ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post