ಕಲ್ಪ ಮೀಡಿಯಾ ಹೌಸ್ | ಧರ್ಮಸ್ಥಳ |
ಲಾಡ್ಜ್ ಗೆ ಬಂದ ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ಧರ್ಮಸ್ಥಳದಲ್ಲಿ ನಿನ್ನೆ ನಡೆದಿದೆ.
ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಖಾಸಗಿ ಲಾಡ್ಜ್ ಗಳಲ್ಲಿ ಐಡಿ ಕಾರ್ಡ್ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದರು. ಆದರೆ ಯಾವ ಲಾಡ್ಜ್ ಮಾಲೀಕರು ಕೂಡ ಅನ್ಯಕೋಮಿನ ಜೋಡಿ ಅಗಿದ್ದರಿಂದ ರೂಂ ನೀಡದೆ ವಾಪಸ್ ಕಳುಹಿಸಿದ್ದರು.

ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಉಮಾ ಎಂಬ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದು ಅದರಂತೆ ಪೋಷಕರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದು ಯಾವ ಕಾರಣಕ್ಕೆ ಧರ್ಮಸ್ಥಳಕ್ಕೆ ಬಂದಿರುವುದು ಎಂದು ವಿಚಾರಣೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post