ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ.
ಇಂದು 9.15ರ ವೇಳೆಗೆ ಅವರ ಪಾರ್ಥಿವ ಶರೀರವನ್ನು ಮೆಗ್ಗಾನ್ ಆಸ್ಪತ್ರೆಗೆ ತರಲಾಗಿದ್ದು, ಡಾ.ವೀರೇಶ್ ಹಾಗೂ ವೈದ್ಯರ ತಂಡ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಎಸ್’ಪಿ ಕೆ.ಎಂ. ಶಾಂತರಾಜು ಡಿಎಚ್’ಓ ರಾಜೇಶ್ ಸುರಗಿಹಳ್ಳಿ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶ್ರೀಧರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post