ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ/ಶಿವಮೊಗ್ಗ |
ಧರ್ಮಸ್ಥಳ #Dharmastala ಬುರುಡೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಶಿವಮೊಗ್ಗ #Shivamogga ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಮಂಗಳೂರು #Mangalore ಜಿಲ್ಲಾ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಳೆದ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿದ್ದ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು #Bail ಮಂಜೂರು ಮಾಡಿದೆ.
1 ಲಕ್ಷ ರೂಪಾಯಿ ಶೂರಿಟಿ ಇಡುವುದು ಸೇರಿದಂತೆ 12 ಷರತ್ತುಗಳನ್ನು ಚಿನ್ನಯ್ಯನ ಜಾಮೀನಿಗೆ ವಿಧಿಸಲಾಗಿದೆ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯನನ್ನು ಎಸ್’ಐಟಿ ಅಧಿಕಾರಿಗಳು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನಂತರ ಭದ್ರತೆಯ ದೃಷ್ಠಿಯಿಂದ ಚಿನ್ನಯ್ಯನನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸೆ.18ರಂದು ವರ್ಗಾವಣೆ ಮಾಡಲಾಗಿತ್ತು. ಇದೀಗ 79 ದಿನಗಳ ಬಳಿಕ ಚಿನ್ನಯ್ಯಗೆ ಜಾಮೀನು ದೊರೆತಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post