ಕಲ್ಪ ಮೀಡಿಯಾ ಹೌಸ್ | ಧರ್ಮಸ್ಥಳ |
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಪುತ್ತಿಗೆ ಮಠದ
ಕೋಟಿ ಗೀತಾ ಲೇಖನ ಯಜ್ಞದ ಪುಸ್ತಕಗಳನ್ನು ನೀಡಿ ಮಾರ್ಗದರ್ಶನ ಕೋರಲಾಯಿತು.
ರಾಜ್ಯ ಸಭಾ ಸದಸ್ಯರೂ ಆಗಿರುವ ಶ್ರೀ ಹೆಗ್ಗಡೆ ಅವರು ಪುತ್ತಿಗೆ ಶ್ರೀ ಪಾದರ ಈ ಜಾಗತಿಕ ಧಾರ್ಮಿಕ ಸಂಕಲ್ಪಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ , ವಾದಿರಾಜ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಬಿ. ಗೋಪಾಲ ಆಚಾರ್ಯ, ಸಂಕರ್ಷಣ ಪ್ರಖಂಡದ ಗೀತಾ ಪ್ರಚಾರಕ ಕೆ. ವಿ. ರಮಣ ಆಚಾರ್ಯ, ಅಂತರ್ಯಾಮಿಯ ನಂದನ್ ದಳವಾಯಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post