ಕಲ್ಪ ಮೀಡಿಯಾ ಹೌಸ್ | ಧರ್ಮಸ್ಥಳ |
ಶ್ರೀಕ್ಷೇತ್ರ ಧರ್ಮಸ್ಥಳದ Dharmasthala ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ಲಕ್ಷದೀಪೋತ್ಸವ ನೆರವೇರಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ Dr. D. Veerendra Heggade ಅವರ ಸಮ್ಮುಖದಲ್ಲಿ, ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 20ನೇ ಅಧಿವೇಶನವು ನೆರವೇರಲಿದ್ದು, ದೇವಸ್ಥಾನ, ಮುಖ್ಯದ್ವಾರ ಸಹಿತ ದೇವಳದ ನಾಲ್ಕು ಸುತ್ತಿನಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

ಸರ್ಕಾರಿ ವಿವಿಧ ಇಲಾಖೆಗಳಾದ ಆರೋಗ್ಯ, ಅರಣ್ಯ, ಕೃಷಿ, ರೇಷ್ಮೆ, ಹೈನುಗಾರಿಕೆ ಮಳಿಗೆಗಳೂ ಸೇರಿ ಬ್ಯಾಂಕ್‌ಗಳು, ವಾಣಿಜ್ಯ, ಕೈಗಾರಿಕೆಗೆ ಸಂಬಂಧಿಸಿದ 200ಕ್ಕೂ ಹೆಚ್ಚು ಮಳಿಗೆಗಳಿವೆ. ವಸ್ತುಪ್ರದರ್ಶನ ಮಂಟಪದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ನ.21ರಂದು ಲಲಿತೋದ್ಯಾನ ಉತ್ಸವ ಹಾಗೂ ಲಲಿತಕಲಾ ಗೋಷ್ಠಿ,
ನ.22ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ ಸರ್ವಧರ್ಮ ಸಮ್ಮೇಳನ,
ನ.23ರಂದು ಗೌರಿಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ ಮತ್ತು
ನ.24ರಂದು ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ವೈಭವದಿಂದ ನೆರವೇರಲಿದೆ.
ನ.22ರಂದು ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ.
ನ.23ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ರಾಷ್ಟ್ರಪ್ರಶಸ್ತಿ ವಿಜೇತ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಬೆಂಗಳೂರು ಉದ್ಘಾಟಿಸಲಿರುವರು.










Discussion about this post