ಕಲ್ಪ ಮೀಡಿಯಾ ಹೌಸ್ | ಬೆಂಗಳೂರು
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎಂದು ಆರೋಪಿಸಲಾಗಿರುವ ಸರಣಿ ಹತ್ಯೆ ಹಾಗೂ ಶವಗಳ ಸಂಸ್ಕಾರ ಆರೋಪದ ತನಿಖೆ ನಡೆಸಲು SIT ರಚನೆ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ. ಅಗತ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒದಗಿಸಲಾಗುತ್ತದೆ ಎಂದು ಆದೇಶದಲ್ಲಿ ಸೇರಿಸಲಾಗಿದೆ.
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.
ಡಿಜಿಐಜಿಪಿಗೆ ತನಿಖಾ ಹಂತದ ಮಾಹಿತಿ ಆಗಿಂದಾಗ ಕೊಡಬೇಕು. ತನಿಖೆಯ ಅಂತಿಮ ವರದಿಯನ್ನು ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ಎಸ್‍ಐಟಿ ತಂಡಕ್ಕೆ ಸರ್ಕಾರಕ್ಕೆ ಸೂಚಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ಐಪಿಎಸ್ ಅಧಿಕಾರಿಗಳಾದ ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮಾ ತನಿಖಾ ತಂಡದಲ್ಲಿದ್ದಾರೆ.
ಧರ್ಮಸ್ಥಳ ದೇಗುಲದಲ್ಲಿ ಸ್ವಚ್ಛತಾ ಕಾರ್ಯ ಮಾಡಿಕೊಂಡಿದ್ದ ವ್ಯಕ್ತಿ ನೂರಾರು ಅಪರಿಚಿತ ಶವ ಹೂತಿದ್ದೇನೆ ಎಂದು ಹೇಳುತ್ತಿದ್ದಾರೆ. ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತ್ತು.
ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post