ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಕನ್ನಡದ ಖ್ಯಾತ ಹಿರಿಯ ಕವಿ ಡಾ.ಚನ್ನವೀರ ಕಣವಿ(93) #Chennaveera_Kanavi ಇಂದು ವಿಧಿವಶರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಎಸ್’ಡಿಎಂ #SDM_Hospital ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಚನ್ನವೀರ ಕಣವಿಯವರು ಗದಗ #Gadag ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು.
Also Read: ಖ್ಯಾತ ಹಿರಿಯ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ವಿಧಿವಶ
ಚನ್ನವೀರ ಕಣವಿಯವರು ವಿಮರ್ಶೆಯನ್ನು ಬರೆದಿದ್ದರಾದರೂ ಪ್ರಧಾನವಾಗಿ ಅವರು ಕವಿ. ಚೆನ್ನವೀರ ಕಣವಿಯವರು ಕವಿಯಾಗಿ #Poet ಪ್ರಕಟವಾಗಿದ್ದು ನವೋದಯದ ‘ನಡುಹಗಲ’ ಕಾಲದಲ್ಲಿ. ಬೇಂದ್ರೆ, ಕುವೆಂಪು, ಪು.ತಿ.ನ, ಮಧುರಚೆನ್ನ ಮೊದಲಾದವರ ಕಾವ್ಯ ಹೊಸದಾಗಿ ಕಾವ್ಯ ರಚನೆಗೆ ತೊಡಗುವವರನ್ನು ಗಾಢವಾಗಿ ಪ್ರಭಾವಿಸುತ್ತಿದ್ದ ಕಾಲ ಅದು. ಕಣವಿ ಅವರ ಪ್ರಾರಂಭದ ರಚನೆಗಳಲ್ಲಿ ಇಂಥ ಪ್ರಭಾವಗಳ ನೆಲೆಯನ್ನು ಗುರುತಿಸಬಹುದಾಗಿದ್ದು, ಅವರ ಕಾವ್ಯದಲ್ಲಿ ರಮ್ಯ ಮನೋಧರ್ಮ, ಆದರ್ಶಪ್ರಿಯತೆ, ವ್ಯಕ್ತಿತ್ವ ನಿರ್ಮಾಣದ ಹಂಬಲಗಳು ವಿಶೇಷವಾಗಿ ಕಂಡು ಬರುತ್ತವೆ. 1949ರಲ್ಲಿ ಪ್ರಕಟವಾದ ‘ಕಾವ್ಯಾಕ್ಷಿ’, 1950ರಲ್ಲಿ ಪ್ರಕಟವಾದ ‘ಭಾವಜೀವಿ’ ಸಂಗ್ರಹಗಳಲ್ಲಿ ಈ ಎಲ್ಲ ಅಂಶಗಳನ್ನೂ ಗುರುತಿಸಬಹುದು.Also Read: ಪ್ರಾಣ ಬಿಟ್ಟರೂ ಹಿಜಾಬ್ ತೆಗೆಯಲ್ಲ: ಶಿವಮೊಗ್ಗದ ಕಾಲೇಜು ಮುಂದೆ ವಿದ್ಯಾರ್ಥಿನಿ ಆಕ್ರೋಶ
ಕವಿತೆ ಜನತೆಗೆ ತಲುಪುವುದು ಅಗತ್ಯ ಎಂದು ಬಯಸುತ್ತಾ ಬಂದ ಕವಿಗಳಲ್ಲಿ ಕಣವಿ ಅವರೂ ಒಬ್ಬರು. ಅವರು ರಚಿಸಿರುವ ಗೀತೆಗಳನ್ನು ಈ ದೃಷ್ಟಿಯಿಂದ ನೋಡಬೇಕು. ಇಲ್ಲಿ ಅವರ ಗಂಭೀರ ಕಾವ್ಯದ ಆಸಕ್ತಿಗಳೇ ಸರಳ ರೂಪದಲ್ಲಿ ಅಭಿವ್ಯಕ್ತಿ ಪಡೆಯುತ್ತವೆ. ಕಾವ್ಯಬಂಧದಲ್ಲಿ ಅರ್ಥಪುಷ್ಟಿ ಗಿಂತ ನಾದ ಮಾಧುರ್ಯಕ್ಕೆ ಹೆಚ್ಚು ಒತ್ತು ಬೀಳುತ್ತದೆ. ಗೀತೆಗಳ ಸ್ವರೂಪವೇ ಅದು. ಭಾವ ಮತ್ತು ನಾದಗಳಲ್ಲಿ ರಮಿಸಲಾಗದ ಮನಸ್ಸು ಪಾಯಶಃ ಗೀತೆಗಳ ರಚನೆಗೆ ಸಮರ್ಥವಾಗುವುದಿಲ್ಲ. ಕಣವಿ ಅವರ ಗೀತೆಗಳಲ್ಲಿ ಸಹಜ ಕವಿಯೊಬ್ಬ ಬರೆದಾಗ ಮಾತ್ರ ಕಾಣಿಸಿಕೊಳ್ಳಬಲ್ಲ ಅನೇಕ ಕಾವ್ಯಾತ್ಮಕ ಹೊಳಹುಗಳು ವಿಶೇಷವಾಗಿ ಕಂಡು ಬರುತ್ತವೆ.ವಿಶ್ವಭಾರತಿಗೆ ಕನ್ನಡದಾರತಿ, ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ, ಹೂವು ಹೊರಳುವುವು ಸೂರ್ಯನ ಕಡೆಗೆ, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ ಮೊದಲಾದ ಅವರ ಜನಪ್ರಿಯ ಗೀತೆಗಳನ್ನು ಈ ದೃಷ್ಟಿಯಿಂದಲೇ ಲಕ್ಷಿಸಬೇಕಾಗುತ್ತದೆ. ಇಂಥ ರಚನೆಗಳನ್ನು ಸಾಪೇಕ್ಷ ಕಾವ್ಯ ಎಂದು ಪು.ತಿ.ನ ಕರೆಯುತ್ತಾರೆ. ಪು.ತಿ.ನ, ಕೆ.ಎಸ್.ನ, ಜಿ.ಎಸ್.ಎಸ್ ಮೊದಲಾದವರು ಬೆಳೆಸಿಕೊಂಡು ಬಂದಿರುವ ಈ ಗೀತ ರಚನಾ ಪರಂಪರೆಗೆ ಕಣವಿ ಅವರದ್ದೂ ಬೆಲೆಯುಳ್ಳ ಕಾಣಿಕೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post