ಧಾರವಾಡ: ಇಲ್ಲಿ ನಿನ್ನೆ ಸಂಜೆ ಸಂಭವಿಸಿದ ಕಟ್ಟಡ ದುರಂತದ ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್’ಡಿಆರ್’ಎಫ್) ತಂಡ ಆಗಮಿಸಿದ್ದು, ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದೆ.
ನಿರ್ಮಾಣ ಹಂತದ ಕಟ್ಟಡ ಕುಸಿದ ಪರಿಣಾಮ ಹಲವಾರು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಇವರ ರಕ್ಷಣಾ ಕಾರ್ಯ ನಿರಂತರವಾಗಿ ಸಾಗಿದೆ.
ಕಟ್ಟಡದ ಒಳಗೆ ಸಿಲುಕಿರುವ ಕೆಲವರು ಫೋನ್ ಸಂಪರ್ಕಕ್ಕೆ ಸಿಕ್ಕಿದ್ದು, ಅವರಿಗೆ ಧೈರ್ಯ ಹೇಳಿ, ಅವಶೇಷಗಳ ಮಧ್ಯದ ಕಿಂಡಿಯಿಂದ ಆಮ್ಲಜನಕ ಪೂರೈಸಲಾಗುತ್ತಿದೆ. ರಾತ್ರಿವರೆಗೆ ಕಟ್ಟಡದ ಅಂಚಿನಲ್ಲಿ ಹಾಗೂ ಮೇಲಿನ ಮಹಡಿಗಳಲ್ಲಿದ್ದ 40 ಗಾಯಾಳುಗಳು, ಒಂದು ಮೃತದೇಹ ಪತ್ತೆಹಚ್ಚಲು ಸಾಧ್ಯವಾಗಿದೆ.
ಗಾಯಾಳುಗಳಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದ್ದು, 13 ಮಂದಿಯನ್ನು ಹುಬ್ಬಳ್ಳಿ ಕಿಮ್ಸ್’ಗೆ ದಾಖಲಿಸಲಾಗಿದೆ. 43 ಗಾಯಾಳುಗಳಿಗೆ ಧಾರವಾಡ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡದ ಕುಮಾರೇಶ್ವರ ನಗರದಲ್ಲಿ ನಿನ್ನೆ ಸಂಜೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.
Discussion about this post