ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಜಿಲ್ಲೆಯಲ್ಲಿ ಶ್ರೀ ಗಣೇಶ ಹಬ್ಬದ ಪ್ರಯುಕ್ತ ಗಣೇಶ ವಿಗ್ರಹಗಳ ವಿಸರ್ಜನಾ ಸಮಾರಂಭದ ದಿನಗಳಂದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1) ಅಡಿಯಲ್ಲಿ ಪ್ರದತ್ತವಾದ ಅಧಿಕಾರದ ಮೇರೆಗೆ ಜಿಲ್ಲೆಯಲ್ಲಿ ಮದ್ಯಪಾನ, ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ Gurudatta Hegde ಅವರು ಆದೇಶ ಹೋರಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಿಕೊಂಡು ಗಣೇಶ ವಿಗ್ರಹ ವಿಸರ್ಜನಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಲು ಅನುಕೂಲವಾಗುವಂತೆ ಮುಂಜಾಗ್ರತಾಕ್ರಮವಾಗಿ ಮದ್ಯಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
1ನೇ ದಿನ: ಆಗಸ್ಟ್ 30 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 01 ರ ಬೆಳಿಗ್ಗೆ 06 ಗಂಟೆಯವರೆಗೆ,
3ನೇ ದಿನ: ಸೆಪ್ಟೆಂಬರ್ 01 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 03 ರ ಬೆಳಿಗ್ಗೆ 06 ಗಂಟೆಯವರೆಗೆ, 5ನೇ ದಿನ: ಸೆಪ್ಟೆಂಬರ್ 03 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 05 ರ ಬೆಳಿಗ್ಗೆ 6 ಗಂಟೆಯವರೆಗೆ,
7ನೇ ದಿನ: ಸೆಪ್ಟೆಂಬರ್ 05 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 07 ರ ಬೆಳಿಗ್ಗೆ 6 ಗಂಟೆಯವರೆಗೆ,
9ನೇ ದಿನ: ಸೆಪ್ಟೆಂಬರ್ 07 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 09 ರ ಬೆಳಿಗ್ಗೆ 6 ಗಂಟೆಯವರೆಗೆ,
11ನೇ ದಿನ: ಸೆಪ್ಟೆಂಬರ್ 09 ರ ರಾತ್ರಿ 11:59 ರಿಂದ ಸೆಪ್ಟೆಂಬರ್ 11 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿಲಾಗಿದೆ.
Also read: ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ನಿರಂತರ ಪ್ರಯತ್ನ: ಎಸ್. ಎಸ್. ಜ್ಯೋತಿಪ್ರಕಾಶ್
ಆದೇಶದಲ್ಲಿ ತಿಳಿಸಿರುವ ದಿನಾಂಕಗಳಂದು ಮತ್ತು ನಿಗದಿಪಡಿಸಿದ ಸಮಯದಲ್ಲಿ ಭಾರತೀಯ ತಯಾರಿಕೆ ಮದ್ಯದ ಅಂಗಡಿಗಳು, ಬಾರ, ಕ್ಲಬ್‍ಗಳು ಮತ್ತು ಮದ್ಯದ ಡಿಪೆÇೀಗಳು ಮುಚ್ಚತಕ್ಕದ್ದು. ಇದಲ್ಲದೆ ಪರಿಸ್ಥಿತಿ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಂಡು ವಲಯ ಅಬಕಾರಿ ಇನಸ್ಪೆಕ್ಟರ್‍ರು ಹಾಗೂ ಉಪವಿಭಾಗದ ಅಬಕಾರಿ ಅಧೀಕ್ಷಕರು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (2) ರ ನೇದ್ದರನ್ವಯ ಅವಶ್ಯಕತೆ ಕಂಡುಬಂದಲ್ಲಿ ಶಾಂತಿ ಪಾಲನೆಗಾಗಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post