ಕಲ್ಪ ಮೀಡಿಯಾ ಹೌಸ್ | ಧಾರವಾಡ |
ನಗರದ ಕೆಲಗೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಾಣೇಬೆನ್ನೂರು ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ #MLA Prakash Koliwada ಅವರ ಆಪ್ತ ಸಹಾಯಕ ಬಸವರಾಜ್ ಕಲ್ಗೇರಪ್ಪನವರ್ (40) ಮೃತರು ಎಂದು ಗುರುತಿಸಲಾಗಿದೆ.
ಬಸವರಾಜ್ ಅವರು ಸ್ನೇಹಿತನ ಮನೆಗೆ ಬರುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಬಸವರಾಜ್ ಅವರಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸವರಾಜ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಧಾರವಾಡ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು ಪರಾರಿಯಾದ ವಾಹನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















