ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆ ಒದಗಿಸುವಲ್ಲಿ ಧಾರವಾಡ ಜಿಲ್ಲೆಯ ನಾಡಕಛೇರಿಗಳಲ್ಲಿ ಜುಲೈ -2022 ಮಾಸದಲ್ಲಿ ಸ್ವೀಕರಿಸಿದ 28,113 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ . 99.98 ರಷ್ಟು ವಿಲೇವಾರಿ ಮಾಡಿ 7.14 ಸಿಗ್ಮಾ ಮೌಲ್ಯವನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದೆ ಎಂದು ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕಿ ಗಂಗೂಬಾಯಿ ಮಾನಕರ್ ಅಭಿನಂದಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, 8.9 ವಿಲೇವಾರಿ ಸೂಚ್ಯಂಕದ ( Disposal Index ) ಪ್ರಕಾರ ಧಾರವಾಡ ಜಿಲ್ಲೆಯಲ್ಲಿ 9.9 ಪಟ್ಟು ಅರ್ಜಿಗಳನ್ನು ನಿಗದಿತ ಅವಧಿಗಿಂತ ಶೀಘ್ರವಾಗಿ ವಿಲೇವಾರಿ ಮಾಡಿ , ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ.

Also read: ಶಿಕ್ಷಕರು ಮಕ್ಕಳನ್ನು ಕನ್ನಡ ಮಾಧ್ಯಮಕ್ಕೆ ಸೇರಿಸಲು ಮುಂದಾಗಲಿ: ಬಸವರಾಜ ಹೊರಟ್ಟಿ








Discussion about this post