ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಅವರನ್ನು ತಾಲೂಕಿನ ಕೋಟೂರು ಗ್ರಾಮದಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ತಡ ರಾತ್ರಿ ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರವೀಣ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Also read: ಗೋವಾ ಚಿಕ್ಕ ರಾಜ್ಯವಲ್ಲ, ಅದು ಭಾರತ ಮಾತೆಯ ಹಣೆಯ ಮೇಲಿನ ಸಿಂಧೂರದಂತೆ: ಅಮಿತ್ ಶಾ












Discussion about this post