ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮಕ್ಕಳ ಹಾಗೂ ಯುವಜನರ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಆಯೋಜಿಸಿದ್ದ 2025-26ನೇ ಸಾಲಿನ ಕಲಾಪ್ರತಿಭೋತ್ಸವದಲ್ಲಿ ಧಾರವಾಡದ ಸಾನ್ವಿ ಯರಗೊಪ್ಪ ರಾಜ್ಯಮಟ್ಟದ ಪ್ರಥಮ ಸ್ಥಾನ ಗಳಿಸಿದ್ದಾರೆ.
ನಗರದ ವಿ.ಎಸ್. ಪಿಳ್ಳೆ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾದ ಸಾನ್ವಿ, ಚಿತ್ರಕಲೆ ವಿಭಾಗದ ಬಾಲ ಪ್ರತಿಭೆ’ ವಿಭಾಗದಲ್ಲಿ ಈ ಸಾಧನೆ ಮಾಡಿದ್ದಾರೆ.
ಜಿಲ್ಲಾ ಮತ್ತು ಬೆಳಗಾವಿ ವಿಭಾಗ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದ ಇವರು, ಇತ್ತೀಚೆಗೆ ಬೆಂಗಳೂರಿನ ಕನ್ನಡ ಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ 15,000 ರೂ. ನಗದು ಬಹುಮಾನ ಹಾಗೂ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಸಾನ್ವಿ ಅವರ ಈ ಸಾಧನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರಾದ ಕುಮಾರಬಾಬು ಬೆಕ್ಕೇರಿ, ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















