No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಕರ್ನಾಟಕವು ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವಾಗುವತ್ತ ಹೆಜ್ಜೆ

kalpa News by kalpa News
January 12, 2023
in ಹುಬ್ಬಳ್ಳಿ-ಧಾರವಾಡ
0
ಕರ್ನಾಟಕವು ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವಾಗುವತ್ತ ಹೆಜ್ಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಸ್ವಾತಂತ್ರ್ಯೋತ್ಸವ ಅಮೃತ್ ಮಹೋತ್ಸವದ ಅಂಗವಾಗಿ ಹಾಗೂ ಯೋಗವನ್ನು ಕಡ್ಡಾಯ ವಿಷಯವನ್ನಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಳವಡಿಸಿಕೊಂಡಿರುವುದರಿಂದ, ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಹಭಾಗಿತ್ವದಲ್ಲಿ ಕಳೆದ ಅಂತರರಾಷ್ಟ್ರೀಯ ಯೋಗ ದಿನವಾದ ಜೂನ್ 21, 2022 ರಂದು ಯೋಗಥಾನ್ ಕಾರ್ಯಕ್ರಮವನ್ನು ರಾಷ್ಟ್ರದಾದ್ಯಂತ ಆರಂಭಿಸಲಾಗಿದೆ.

ಕರ್ನಾಟಕವು 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಆತಿಥ್ಯ ವಹಿಸುತ್ತಿರುವ ಹಿನ್ನಲೆಯಲ್ಲಿ ಯೋಗಥಾನ್ ಕಾರ್ಯಕ್ರಮದ ಅಂತಿಮ ಘಟ್ಟವನ್ನು ಜನವರಿ 15, 2023ರಂದು 10 ಸಾವಿರ ಯೋಗಬೋಧಕರು ಮತ್ತು 10 ಲಕ್ಷಕ್ಕೂ ಅಧಿಕ ಯೋಗಾಸಕ್ತರಿಂದ ಗಿನ್ನೆಸ್ ವಿಶ್ವದಾಖಲೆ ಪ್ರಯತ್ನವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26ನೇ ರಾಷ್ಟ್ರೀಯ ಯುವಜನೋತ್ಸವದಲ್ಲಿ ಜನವರಿ 15 ರಂದು ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ರಾಣಿ ಚೆನ್ನಮ್ಮ ಕ್ರೀಡಾಂಗಣ, ಕೃಷಿ ವಿಶ್ವವಿದ್ಯಾಲಯದ ಕ್ರೀಡಾಂಗಣ ಮತ್ತು ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಮತ್ತು ಹುಬ್ಬಳ್ಳಿಯ ರೈಲ್ವೆ ಕ್ರಿಕೇಟ್ ಮೈದಾನದಲ್ಲಿ ಬೃಹತ್ ಯೋಗಾಥಾನ್ ಸಂಘಟಿಸಲು ಜಿಲ್ಲಾಡಳಿತ ಭರದ ಸಿದ್ಧತೆ ಮಾಡಿಕೊಂಡಿದೆ.
ಅಂದು ಬೆಳಿಗ್ಗೆ ಅವಳಿ ನಗರದ ಈ ನಾಲ್ಕು ಮೈದಾನಗಳಲ್ಲಿ ಬೆಳಿಗ್ಗೆ 6-30 ರಿಂದ 9-30 ಗಂಟೆಯವರೆಗೆ ಯೋಗಾಥಾನ್ ನಡೆಯಲಿದೆ. ಇದರಲ್ಲಿ ರಾಷ್ಟ್ರೀಯ ಯುವಜನೋತ್ಸವಕ್ಕೆ ವಿವಿಧ ರಾಜ್ಯಗಳಿಂದ ಆಗಮಿಸಿರುವ 7,500 ಪ್ರತಿನಿಧಿಗಳು ಮತ್ತು ಧಾರವಾಡ ಜಿಲ್ಲೆಯ ಸುಮಾರು 22 ಸಾವಿರ ಯೋಗಾಸಕ್ತರು ಭಾಗವಹಿಸಲಿದ್ದಾರೆ.

ಕ್ರೀಡಾಂಗಣಗಳಲ್ಲಿ ಯೋಗಾಥಾನ್ ಯಶಸ್ವಿಗಾಗಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಶೌಚಾಲಯಗಳ ವ್ಯವಸ್ಥೆ ಮಾಡಲಾಗುತ್ತಿದೆ. ಕ್ರೀಡಾಂಗಣಗಳಲ್ಲಿ ಪ್ರತಿ ಯೋಗಾಪಟುಗೆ ನಿರ್ಧಿಷ್ಟ ಸ್ಥಳ ಗುರುತಿಸಿ, ಸುಣ್ಣದ ಗೆರೆ ಹಾಕಿ, ಯೋಗಪಟುಗಳು ಶಿಸ್ತುಬದ್ಧವಾಗಿ ಭಾಗವಹಿಸಲು ಅನುಕೂಲವಾಗುವಂತೆ ಮಾಡಲಾಗಿದೆ.

ಯುವಜನೋತ್ಸವಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ 7500 ಪ್ರತಿನಿಧಿಗಳಿಗೆ ಯುಪ್ಲೆಕ್ಸ್ ಮತ್ತು ಟಾಟಾ ಇಟಾಚಿ ಕಂಪನಿಗಳು ಉತ್ತಮ ಗುಣಮಟ್ಟದ ಯೋಗಾ ಮ್ಯಾಟ್‍ಗಳನ್ನು ಕೊಡುಗೆಯಾಗಿ ನೀಡಿವೆ. ಸ್ವಾಗತ ಸಮಿತಿಯು ಪ್ರತಿನಿಧಿಗಳ ವೆಲ್‍ಕಂ ಕಿಟ್‍ದೊಂದಿಗೆ ಈ ಮ್ಯಾಟ್‍ಗಳನ್ನು ಸಹ ನೀಡಿದೆ.
ರಾಜ್ಯ ಸರ್ಕಾರವು ಯೋಗ ತರಬೇತಿ ಮತ್ತು ಪ್ರದರ್ಶನಕ್ಕೆ ವಿಶೇಷ ಆಧ್ಯತೆ ನೀಡಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಯೋಗ ಒಂದು ಅಧ್ಯಯನ ವಿಷಯವಾಗಿ ಮತ್ತು ಸಂಶೋಧನಾ ವಿಷಯವಾಗಿ ಬಹು ಹಿಂದಿನಿಂದಲೂ ಯೋಗಾಸಕ್ತ ವಿದ್ಯಾರ್ಥಿಗಳು, ಬೋಧಕರು ಅಳವಡಿಸಿಕೊಂಡಿದ್ದಾರೆ. ಪ್ರಧಾನಮಂತ್ರಿಗಳ ವಿಶೇಷ ಆಸಕ್ತಿ ಮತ್ತು ಆಧ್ಯತೆಯಿಂದಾಗಿ ಇಡೀ ವಿಶ್ವವೇ ಇಂದು ಯೋಗದತ್ತ ಹೊರಳುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಯೋಗಾಥಾನ್ ಕಾರ್ಯಕ್ರಮದ ಮೂಲಕ ಹೊಸ ದಾಖಲೆ ಸೃಷ್ಟಿಸಲು ಮುಂದಾಗಿದೆ. ರಾಜ್ಯವು ಯೋಗ ಸಾಕ್ಷರ ರಾಜ್ಯವಾಗಲು ಆಸಕ್ತಿ ಹೊಂದಿದೆ.

ಈ ಹಿಂದೆ ರಾಜಸ್ಥಾನದಲ್ಲಿ ಸುಮಾರು 1.6 ಲಕ್ಷ ಜನರಿಂದ ನಿರ್ಮಿಸಲಾಗಿದ್ದ ಯೋಗ ದಾಖಲೆಯನ್ನು ಯೋಗಥಾನ್ ಕಾರ್ಯಕ್ರಮದ ಮೂಲಕ ಅಳಿಸಿ ಹಾಕಲಾಗುತ್ತದೆ. ಈ ಮೂಲಕ ಕರ್ನಾಟಕವನ್ನು ದೇಶದ ಮೊದಲ ಯೋಗ ಸಾಕ್ಷರತಾ ರಾಜ್ಯವನ್ನಾಗಿ ಮಾಡಲಾಗುತ್ತಿದೆ.

ಸುಮಾರು 13 ಲಕ್ಷ ವಿದ್ಯಾರ್ಥಿಗಳು, 12,000 ಯೋಗಬೋಧಕರು ಮತ್ತು 8,000 ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳು ವೆಬ್ www.yogathon2022.com ಪೋರ್ಟ್‍ಲ್‍ದಲ್ಲಿ ಈವರೆಗೂ ನೋಂದಣಿ ಮಾಡಿಕೊಂಡಿರುತ್ತಾರೆ. ದೆಹಲಿಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಶಿಕ್ಷಣ ಸಂಸ್ಥೆಯು ಈ ಕಾರ್ಯಕ್ರಮದ ಜ್ಞಾನ ಪಾಲುದಾರ (Knowledge Partner) ವಾಗಿದ್ದು, ಯೋಗಪಟುಗಳಿಗೆ ತರಬೇತಿಗೆ ಸಂಬಂಧಿಸಿದ ವಿಷಯಗಳಲ್ಲಿ ಮಾರ್ಗದರ್ಶನ ನೀಡುತ್ತಿದೆ.
ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗೆ ಆಗುವ ಪ್ರಯೋಜನಗಳು: 100 ವಿದ್ಯಾರ್ಥಿಗಳನ್ನು ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಯೋಗ ಫಾರ್ ವೆಲೆನೆಸ್ ಕಾರ್ಯಕ್ರಮಕ್ಕೆ ದಾಖಲು ಮಾಡುವ ಶಿಕ್ಷಣ ಸಂಸ್ಥೆಗೆ 10,000 ಪ್ರೋತ್ಸಾಹ ಧನವನ್ನು ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ನೀಡಲಾಗುತ್ತದೆ.

ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಯೋಗಥಾನ್ ಕಾರ್ಯಕ್ರಮಕ್ಕೆ ನೋಂದಾಯಿಸಲು ಪ್ರಥಮ ಮೂರು ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಬಹುಮಾನ ನೀಡಲಾಗುವುದು.

500-1000 ವಿದ್ಯಾರ್ಥಿಗಳನ್ನು ಯೋಗಥಾನ್ ಕಾರ್ಯಕ್ರಮಕ್ಕೆ ನೋಂದಾಯಿಸುವ ಶಾಲೆ, ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗೆ ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ಪ್ರಮಾಣಿಕೃತ ಯೋಗ ಕೇಂದ್ರ ಎಂದು ಗುರುತಿಸಲಾಗುತ್ತದೆ. ಇದಕ್ಕಾಗಿ ನಿಗದಿಪಡಿಸಿರುವ ಶುಲ್ಕವಾದ 25,000 ಗಳನ್ನು ಪಾವತಿಸುವ ಬದಲು ಯೋಗಥಾನ್ ಕಾರ್ಯಕ್ರಮದ ಮೂಲಕ ಕೇವಲ 1,000 ಶುಲ್ಕವನ್ನಷ್ಟೇ ಪಾವತಿ ಮಾಡಬೇಕಾಗುತ್ತಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಯೋಗ ಪಠ್ಯಕ್ರಮವನ್ನು ಶಾಲೆ, ಕಾಲೇಜುಗಳು ಅಳವಡಿಸಿಕೊಳ್ಳಬಹುದು. ಯೋಗ ತರಬೇತುದಾರರಿಗೆ ಆಗುವ ಪ್ರಯೋಜನಗಳು: ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಯೋಗ ಫಾರ್ ವೆಲ್‍ನೆಸ್ ಕಾರ್ಯಕ್ರಮಕ್ಕೆ ಕನಿಷ್ಠ 100 ವಿದ್ಯಾರ್ಥಿಗಳನ್ನು ನೋಂದಾಯಿಸುವ ಯೋಗ ಬೋಧಕರಿಗೆ ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ರೂ. 10,000 ಪ್ರೋತ್ಸಾಹ ಧನ ನೀಡಲಾಗುತ್ತದೆ.

ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಯೋಗಬೋಧಕ ಹಂತ-1 ಕ್ಕೆ ರೂ.1,770/- ಪಾವತಿಸಿ, ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣಗೊಳ್ಳುವ ಮೂಲಕ ಯೋಗ ಸರ್ಟಿಫಿಕೇಶನ್ ಬೋರ್ಡ್‍ನಿಂದ ಪ್ರಮಾಣಿಕೃತ್ ಯೋಗ ಭೋಧಕರಾಗಬಹುದು. ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಪರ್ಸನಲ್ ರಿವ್ಯೂ ಸರ್ಟಿಫಿಕೇಶನ್ ಅಂಗವಾಗಿರುವ ಆಯುಷ್ ಟಿ.ವಿ.ಯು ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 8 ರ ವರೆಗೆ ಯೋಗ ತರಬೇತುದಾರ ಹಂತ್-1 ರ ಆನ್‍ಲೈನ್ ತರಬೇತಿ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದೆ. ಯೋಗ ಬೋಧಕರ ಪರೀಕ್ಕೆ ತೆಗೆದುಕೊಳ್ಳುವ ಅಭ್ಯರ್ಥಿಗಳು ಆಯುಷ್ ಟಿ.ವಿ.ಯ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬಹುದು.

ಯೋಗ ಸರ್ಟಿಫಿಕೇಶನ್ ಬೋರ್ಡ್‍ನ ಹಂತ್-1ರ ಪರೀಕ್ಷೆಯನ್ನು ಮೊಬೈಲ್ ಮೂಲಕ, ಯಾವ ಸ್ಥಳದಿಂದ ಆದರೂ ತೆಗೆದುಕೊಳ್ಳಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.21,22 ಉತ್ತರ ಕರ್ನಾಟಕ ಉತ್ಸವ: ಸಿಎಂ ಬೊಮ್ಮಾಯಿ ಅವರಿಂದ ಲೋಗೋ ಬಿಡುಗಡೆ

Next Post

ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಕೋರ್ಟ್ ಆದೇಶ

kalpa News

kalpa News

Next Post

ಮಾಜಿ ಸಚಿವ ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಕೋರ್ಟ್ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL