ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಕಲಿಕೆಯನ್ನು ಸಮುದಾಯದ ಕಣ್ಣೆದುರು ತರುವ ಮಹತ್ವದ ಪ್ರಯತ್ನವೇ ಕಲಿಕಾ ಹಬ್ಬವಾಗಿದೆ. ಪ್ರತಿ ತರಗತಿಯೂ ಮಗುವಿಗೆ ಹಬ್ಬವಾಗಬೇಕು. ಮಗು ತನ್ನ ಬಾಲ್ಯವನ್ನು ಸಂಭ್ರಮಿಸಬೇಕೆಂದರೆ ಕಲಿಕೆಯು ಹಬ್ಬವಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಗಜಾನನ ಮನ್ನಿಕೇರಿ ಅವರು ತಿಳಿಸಿದರು.
ಸಾಧನಕೇರಿಯ ಆದರ್ಶ ವಿದ್ಯಾಲಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ ಧಾರವಾಡ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಹಂತದ ಹಾಗೂ ಧಾರವಾಡ ಗ್ರಾಮೀಣ ವಲಯದ 3 ದಿನಗಳ ಕಲಿಕಾ ಹಬ್ಬದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲ ಶಿಕ್ಷಕರು, ಸಮುದಾಯದವರು ಹಾಗೂ ಅಧಿಕಾರಿಗಳು ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಂತ ಹಂತವಾಗಿ ತರಬೇತಿ ಮಾಡುವುದರ ಮೂಲಕ ಮಕ್ಕಳನ್ನು ಸಂಪೂರ್ಣವಾಗಿ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಮಗು ತನ್ನದೇ ಲೋಕವೊಂದನ್ನು ವಿಸ್ತರಿಸಿಕೊಳ್ಳುತ್ತಾ ಎಲ್ಲ ಸೀಮೆಗಳನ್ನು ಉಲ್ಲಂಘಿಸಿ ವಿಶ್ವಮಾನವನಾಗಲು ಇಂತಹ ಸಡಗರ ಅನಿವಾರ್ಯವಾಗಿದೆ. ಕೋವಿಡ್-19 ರ ಪರಿಣಾಮವಾಗಿ ಮಕ್ಕಳ ಕಲಿಕೆಯಲಿ ಉಂಟಾದ ಕೊರತೆಯನ್ನು ತುಂಬುವಂತೆ ಶಿಕ್ಷಕರಿಗೆ ತಿಳಿಸಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಅಭಿವೃದ್ಧಿ ಎನ್.ಕೆ.ಸಾಹುಕಾರ ಮಾತನಾಡಿ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳು ಕಲಿಕಾ ಚೇತರಿಕೆಯ ಚಟುವಟಿಕೆಗಳನ್ನು ಇನ್ನಷ್ಟು ಉತ್ತಮೀಕರಿಸಲು ಹಾಗೂ ಗುಣಾತ್ಮಕ ಶಿಕ್ಷಣವನ್ನು ಗಟ್ಟಿಗೊಳಿಸುವುದಕ್ಕಾಗಿ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಮಗುವಿನ ಹೊರ ಬದುಕಿನ ಅನುಭವಗಳು ಕಲಿಕೆಯ ಪ್ರಕ್ರಿಯೆಯಲ್ಲಿ ಬಳಕೆಯಾಗುತ್ತವೆ. ವಿದ್ಯಾರ್ಥಿಗಳಿಗೆ ತಮ್ಮ ಅಭಿಪ್ರಾಯಗಳನ್ನು ಹೇಳಲು ಮುಕ್ತ ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲ ಅಧಿಕಾರಿಗಳು ಶಿಕ್ಷಕರು ಇದನ್ನು ಉತ್ತೇಜಿಸಬೇಕೆಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಎಸ್.ಎಸ್.ಕೆಳದಿಮಠ ಮಾತನಾಡಿ, ಕಲಿಕಾ ಹಬ್ಬ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಹಂತದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ತಮ್ಮ ತಮ್ಮಲ್ಲಿ ಚರ್ಚಿಸಿ, ತಾರ್ಕಿಕವಾಗಿ ಆಲೋಚಿಸಿ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮಾರ್ಗಗಳನ್ನು ತಾವೇ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ 84 ಕ್ಲಸ್ಟರ್‍ಗಳಲ್ಲಿ ಜನೇವರಿ 2023 ರಿಂದ ಅದ್ಧೂರಿಯಾಗಿ ಆಚರಣೆ ಮಾಡಿ ಮಕ್ಕಳ ಕಲಿಕೆಯನ್ನು ಉತ್ತೇಜಿಸಲಾಗುತ್ತದೆ ಎಂದರು.
ಎಸ್.ಎಸ್.ಕೆ ಉಪಯೋಜನಾಧಿಕಾರಿ ಜಿ.ಎನ್.ಮಠಪತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರ್.ಎಂ.ಎಸ್.ಎ ಉಪಯೋಜನಾಧಿಕಾರಿ ಎಸ್.ಎಂ.ಹುಡೇದಮನಿ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post