No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಗರ್ಭಿಣಿ ವಿಚಾರದಲ್ಲಿ ವೈದ್ಯಕೀಯ ನಿರ್ಲಕ್ಷ: ಪ್ರಸೂತಿ ತಜ್ಞೆಗೆ ಬಿತ್ತು ಬರೋಬ್ಬರಿ 11 ಲಕ್ಷ ರೂ. ದಂಡ

ಇಷ್ಟಕ್ಕೂ ಪ್ರಸೂತಿ ತಜ್ಞೆ ಮಾಡಿದ ಎಡವಟ್ಟು ಏನು ಗೊತ್ತಾ? ಇದರಿಂದ ಎಷ್ಟು ದೊಡ್ಡ ಅನಾಹುತವಾಗಿದೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 9, 2023
in ಹುಬ್ಬಳ್ಳಿ-ಧಾರವಾಡ
0
ಗರ್ಭಿಣಿ ವಿಚಾರದಲ್ಲಿ ವೈದ್ಯಕೀಯ ನಿರ್ಲಕ್ಷ: ಪ್ರಸೂತಿ ತಜ್ಞೆಗೆ ಬಿತ್ತು ಬರೋಬ್ಬರಿ 11 ಲಕ್ಷ ರೂ. ದಂಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಗರ್ಭಿಣಿಯೊಬ್ಬರ ತಪಾಸಣೆ ವಿಚಾರದಲ್ಲಿ ವೈದ್ಯಕೀಯ ನಿರ್ಲಕ್ಷ ತೋರಿದ ಪರಿಣಾಮ ಅಂಗವಿಕಲ ಶಿಶು ಜನಿಸಿದ್ದು, ನಿರ್ಲಕ್ಷ ತೋರಿದ ವೈದ್ಯರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಬರೋಬ್ಬರಿ ರೂ. 11,10,000 ದಂಡ ವಿಧಿಸಿದ ಘಟನೆ ನಡೆದಿದೆ.

ಘಟನೆ ಹಿನ್ನೆಲೆಯೇನು?
ಶ್ರೀನಗರ ಭಾವಿಕಟ್ಟಿ ಪ್ಲಾಟ್ ನಿವಾಸಿ ಪರಶುರಾಮ ಘಾಟಗೆ ಎಂಬುವವರು ತಮ್ಮ ಗರ್ಭಿಣಿ ಪತ್ನಿ ಪ್ರೀತಿಯನ್ನು 3ನೆಯ ತಿಂಗಳಿಂದ 9ನೆಯ ತಿಂಗಳಿನವರೆಗೆ ಧಾರವಾಡದ ಮಾಳಮಡ್ಡಿಯಲ್ಲಿರುವ ಖಾಸಗಿ ನರ್ಸಿಂಗ್ ಹೋಂನ ಪ್ರಸೂತಿ ತಜ್ಞೆ ಡಾ. ಸೌಭಾಗ್ಯ ಕುಲಕರ್ಣಿರವರ ಬಳಿ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆದಿದ್ದರು.
ಪ್ರಸೂತಿ ತಜ್ಞರು 2018ರ ಜುಲೈ 12ರಿಂದ 2019ರ ಜನವರಿ 8ರವರೆಗೂ 5 ಬಾರಿ ಪ್ರೀತಿ ಅವರಿಗೆ ಸ್ಕ್ಯಾನ್ ಮಾಡಿದ್ದರು. ಗರ್ಭದಲ್ಲಿನ ಮಗುವಿನ ಬೆಳವಣಿಗೆ ಚೆನ್ನಾಗಿದೆ ಹಾಗೂ ಮಗು ಆರೋಗ್ಯವಾಗಿದೆ ಎಂದು ತಿಳಿಸುತ್ತಿದ್ದರು. ದೂರುದಾರರ ಪತ್ನಿ ತನ್ನ 9ನೆಯ ತಿಂಗಳಿನಲ್ಲಿ ಅದೇ ವೈದ್ಯರ ಹತ್ತಿರ ತಪಾಸಣೆಗೆ ಹೋದಾಗ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲು ಅವರು ಸಲಹೆ ನೀಡಿದ್ದರು. ಆದರೆ ಹಣಕಾಸಿನ ತೊಂದರೆಯಿಂದಾಗಿ 2019ರ ಜನವರಿ 31ರಂದು ಪ್ರೀತಿ ಅವರಿಗೆ ಧಾರವಾಡ ಎಸ್’ಡಿಎಂ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದ್ದರು. ಆಗ ಹೆಣ್ಣು ಮಗು ಜನಿಸಿದ್ದು ಅದರ ಎರಡು ಕಾಲುಗಳು ಅಂಗವಿಕಲತೆಯಿಂದ ಕೂಡಿದ್ದವು.

Also read: ರೈಲ್ವೆ ಸ್ವಚ್ಛತಾ ಕಾರ್ಮಿಕರ ಮರು ನೇಮಕಕ್ಕೆ ಹೈಕೋರ್ಟ್‌ಗೆ ಅರ್ಜಿ: ಶಿವಣ್ಣ ಕೋಟೆ

ಆದರೆ ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ಪ್ರಕಾರ ಹಾಗೂ ಅಲ್ಟ್ರಾಸೌಂಡ್ ಸ್ಕ್ಯಾನ್ ನಿಯಮಾವಳಿ ಪ್ರಕಾರ ಗರ್ಭಧಾರಣೆಯ 18-20 ವಾರಗಳ ಸ್ಕ್ಯಾನಿಂಗ್’ನಲ್ಲಿ ಮಗುವಿನ ಆರೋಗ್ಯ, ಅದರ ಅಂಗಾಂಗಗಳು ಸರಿಯಾಗಿ ಇವೆಯೋ ಅಥವಾ ಇಲ್ಲವೋ ಅನ್ನುವ ಬಗ್ಗೆ ತಪಾಸಣೆ ಮಾಡಿದ ವೈದ್ಯರಿಗೆ ಗೊತ್ತಾಗುತ್ತದೆ.
ಆದರೆ 20 ವಾರಗಳಿಂದ 36 ವಾರಗಳ ಪ್ರೀತಿಯ ಸ್ಕ್ಯಾನಿಂಗನ್ನು ಎದುರುದಾರ ಪ್ರಸೂತಿ ತಜ್ಞರು ತೆಗೆದು ನೋಡಿದಾಗ ಅವರಿಗೆ ಮಗುವಿನ ಅಂಗವಿಕಲತೆ ಬಗ್ಗೆ ಗೊತ್ತಿತ್ತು. ಆ ವಿಷಯವನ್ನು ದೂರುದಾರರಿಗೆ ತಿಳಿಸದೇ ಮೋಸ ಮಾಡಿ ವೈದ್ಯಕೀಯ ನಿರ್ಲಕ್ಷ ತೋರಿ ತಮಗೆ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಆ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ ಪ್ರಸೂತಿ ತಜ್ಞರು ಕಾಲಕಾಲಕ್ಕೆ ದೂರುದಾರರ ಪತ್ನಿಯ ಸ್ಕ್ಯಾನಿಂಗ್ ತೆಗೆದು ತಪಾಸಣೆ ಮಾಡಿದಾಗ ಅವರಿಗೆ ಗರ್ಭದಲ್ಲಿರುವ ಶಿಶುವಿನ ಅಂಗವಿಕಲತೆ ಗೊತ್ತಾಗುತ್ತದೆ.
ಎಂಟಿಪಿ ಕಾಯ್ದೆ ಪ್ರಕಾರ 20 ವಾರಗಳ ಗರ್ಭದ ಸಮಯದಲ್ಲಿ ಶಿಶುವಿನ ಅಂಗವಿಕಲತೆಯ ಬಗ್ಗೆ ವೈದ್ಯರಿಗೆ ತಿಳಿದಿದ್ದು ಆ ಸಂಗತಿಯನ್ನು ಅವರು ದೂರುದಾರರ ಗಮನಕ್ಕೆ ತಂದಿದ್ದರೆ ಅವರು ಕಾನೂನಿನ ಪ್ರಕಾರ ಅಂಗವಿಕಲ ಮಗುವನ್ನು ಗರ್ಭದಲ್ಲಿ ಉಳಿಸಿಕೊಳ್ಳಬೇಕೋ ಅಥವಾ ಬೇಡವೋ ಅನ್ನುವ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಿದ್ದರು. ಆದರೆ ಶಿಶುವಿನ ಅಂಗವಿಕಲತೆಯ ಮಹತ್ವದ ಸಂಗತಿಯನ್ನು ತಜ್ಞ ವೈದ್ಯಯಾದ ಎದುರುದಾರರು ದೂರುದಾರರಿಗೆ ತಿಳಿಸದೆ ಅವರು ತಮ್ಮ ವೈದ್ಯಕೀಯ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷತೆ ವಹಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ಆಯೋಗ ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ವೈದ್ಯರ ಅಂತಹ ನಡವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ ಮತ್ತು ರಾಷ್ಟಿçÃಯ ಗ್ರಾಹಕರ ಆಯೋಗದ ತೀರ್ಪುಗಳನ್ನು ಆಧರಿಸಿ ಜಿಲ್ಲಾ ಗ್ರಾಹಕರ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ತಜ್ಞರ ನಿರ್ಲಕ್ಷತನದಿಂದ ಜನಿಸಿರುವ ಅಂಗವಿಕಲ ಹೆಣ್ಣು ಮಗುವಿನ ಈವರೆಗಿನ ಚಿಕಿತ್ಸೆ ಹಾಗೂ ಭವಿಷ್ಯದ ಚಿಕಿತ್ಸೆ ಮತ್ತು ಅದರ ಭವಿಷ್ಯದ ಜೀವನ ನಿರ್ವಹಣೆಯ ಬಗ್ಗೆ ಆಯೋಗ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಜನಿಸಿದ ಹೆಣ್ಣು ಮಗುವಿನ ಈವರೆಗಿನ ವೈದ್ಯಕೀಯ ಖರ್ಚಿಗೆ ರೂ.50,000, ದೂರುದಾರರ ಓಡಾಟ ಮತ್ತು ಖರ್ಚು ವೆಚ್ಚಕ್ಕೆ ರೂ.50,000, ಅಂಗವಿಕಲ ಮಗುವಿನ ಪಾಲಕರಿಗೆ ಆಗಿರುವ ಮಾನಸಿಕ ನೋವು ಮತ್ತು ಹಿಂಸೆಗಾಗಿ ರೂ.2,00,000, ಅಂಗವಿಕಲ ಹೆಣ್ಣುಮಗುವಿನ ಭವಿಷ್ಯದ ವೈದ್ಯಕೀಯ ಖರ್ಚು ವೆಚ್ಚಕ್ಕಾಗಿ ರೂ.3,00,000 ಹಾಗೂ ಸದರಿ ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯದ ಜೀವನ ನಿರ್ವಹಣೆಗಾಗಿ ರೂ.5,00,000 ಮತ್ತು ಈ ಪ್ರಕರಣದ ಖರ್ಚು ವೆಚ್ಚ ಎಂದು ರೂ.10,000 ಸೇರಿ ಒಟ್ಟು ರೂ.11,10,000 ಪರಿಹಾರವನ್ನು ಈ ತೀರ್ಪು ನೀಡಿದೆ.
ತೀರ್ಪಿನ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ದೂರುದಾರರಿಗೆ ನೀಡುವಂತೆ ತಪ್ಪಿದ್ದಲ್ಲಿ ಅ ಮೊತ್ತದ ಮೇಲೆ ಶೇ.8 ರಂತೆ ಬಡ್ಡಿ ಕೊಡುವಂತೆ ಎದುರುದಾರ ತಜ್ಞ ವೈದ್ಯರಿಗೆ ಆಯೋಗ ಆದೇಶಿಸಿದೆ.

ಸದರಿ ರೂ.11,10,000 ಪರಿಹಾರದಲ್ಲಿ ರೂ.8,00,000 ಹಣವನ್ನು ಅಲ್ಪವಯಿ ಅಂಗವಿಕಲ ಹೆಣ್ಣು ಮಗುವಿನ ಹೆಸರಿನಲ್ಲಿ ಅವಳು ವಯಸ್ಕಳಾಗುವವರೆಗೆ ದೂರುದಾರರು ಇಚ್ಚಿಸುವ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಖಾಯಂ ಠೇವಣಿ ಇಡಲು ಮತ್ತು ಪರಿಹಾರದ ಪೂರ್ತಿ ಹಣವನ್ನು ಅಂಗವಿಕಲ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ಖರ್ಚು ಮಾಡಲು ಆಯೋಗ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share197Tweet123Send
Previous Post

ರೈಲ್ವೆ ಸ್ವಚ್ಛತಾ ಕಾರ್ಮಿಕರ ಮರು ನೇಮಕಕ್ಕೆ ಹೈಕೋರ್ಟ್‌ಗೆ ಅರ್ಜಿ: ಶಿವಣ್ಣ ಕೋಟೆ

Next Post

ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣರ ಆಕ್ರೋಶ: ಬಹಿರಂಗ ಕ್ಷಮಾಪಣೆಗೆ ಪಟ್ಟು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣರ ಆಕ್ರೋಶ: ಬಹಿರಂಗ ಕ್ಷಮಾಪಣೆಗೆ ಪಟ್ಟು

ಕುಮಾರಸ್ವಾಮಿ ವಿರುದ್ಧ ಬ್ರಾಹ್ಮಣರ ಆಕ್ರೋಶ: ಬಹಿರಂಗ ಕ್ಷಮಾಪಣೆಗೆ ಪಟ್ಟು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL