ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಮೈಸೂರು ದಸರಾ ಜಂಬೂಸವಾರಿಯ ಮೆರವಣಿಗೆಯಲ್ಲಿ ಸಾಗುವ ಸ್ತಬ್ದಚಿತ್ರಗಳು ಕನ್ನಡ ನಾಡಿನ ಸಾಹಿತ್ಯ, ಸಂಸ್ಕøತಿ, ಪರಿಸರ ಹಾಗೂ ಇತರ ಪರಂಪರೆಗಳನ್ನು ಬಿಂಬಿಸುವ ಮೂಲಕ ಜನರ ಗಮನ ಸೆಳೆಯುತ್ತವೆ. ಧಾರವಾಡ ಜಿಲ್ಲೆಯ ಸಂಗೀತ, ಸಾಹಿತ್ಯ ಮತ್ತು ಸಂಸ್ಕೃತಿ ಶ್ರೀಮಂತಿಕೆಯನ್ನು ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಹೇಳಿದರು.
ಮೈಸೂರು ದಸರಾ ಕಾರ್ಯಕ್ರಮದ ಮೆರವಣಿಗೆಯಲ್ಲಿ ಸ್ತಬ್ದಚಿತ್ರ ಭಾಗವಹಿಸುವ ಮತ್ತು ವಸ್ತು ಪ್ರದರ್ಶನದಲ್ಲಿ ಮಳಿಗೆ ಸ್ಥಾಪಿಸುವ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ, ಅವರು ಮಾತನಾಡಿದರು.
ಮೈಸೂರು ದಸರಾ ಮಹೋತ್ಸವ ಬರುವ ಸಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಯು ಅಕ್ಟೋಬರ್ 5 ರಂದು ನಡೆಯಲಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಜಿಲ್ಲೆಯಿಂದ ಸ್ತಬ್ದಚಿತ್ರ ಭಾಗವಹಿಸಲಿದೆ. ಮೆರವಣಿಗೆಯಲ್ಲಿ ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿ ಬಿಂಬಿಸುವ, ಪರಿಸರ, ಅರಣ್ಯೀಕರಣ, ಅಂರ್ಜಲ, ಪರಿಸರ ಸ್ನೇಹಿ, ಪ್ರವಾಸೋದ್ಯಮ, ಸಂವಿಧಾನ, ಸಮಾನತೆ ಹಾಗೂ ಕೋಮು ಸಾಮರಸ್ಯ ಬಿಂಬಿಸುವ ಸ್ತಬ್ದಚಿತ್ರಗಳನ್ನು ರೂಪಿಸಿ, ಪ್ರದರ್ಶಿಸಲಾಗುತ್ತದೆ. ಇದಕ್ಕೆ ಸಂಬಂದಿಸಿದಂತೆ ಅಧಿಕಾರಿಗಳು ತಕ್ಷಣ ಕ್ರಮವಹಿಸಬೇಕು. ಧಾರವಾಡ ಜಿಲ್ಲೆಯ ಸಂಸ್ಕೃತಿ, ಸಾಹಿತ್ಯ, ಪರಿಸರ, ನಾಡು-ನುಡಿ ಬಿಂಬಿಸುವ ಸ್ತಬ್ದಚಿತ್ರಗಳನ್ನು ರೂಪಿಸಬೇಕು ಎಂದು ಜಿ.ಪಂ.ಸಿಇಓ ಡಾ. ಸುರೇಶ ಇಟ್ನಾಳ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮಂಡಿಸಿದ ವಿಷಯಗಳ ಆಧಾರದ ಮೇಲೆ ಧಾರವಾಡ ಜಿಲ್ಲೆಯಿಂದ ಸ್ತಬ್ದಚಿತ್ರ ನಿರ್ಮಿಸಲು ಸಂಗೀತ ದಿಗ್ಗಜ್ಜರು, ಸಾಹಿತ್ಯ ದಿಗ್ಗಜ್ಜರು ಮತ್ತು ಸಮಗ್ರ ಕೃಷಿ ಪದ್ದತಿ ಕುರಿತು ಮೂರು ವಿಷಯಗಳನ್ನು ಆಯ್ಕೆ ಮಾಡಲಾಯಿತು. ಈ ವಿಷಯಗಳ ಕುರಿತು ಸ್ತಬ್ದಚಿತ್ರ ಪೂರಕ ಮಾಹಿತಿ, ಮಾದರಿ ರೂಪಿಸಿ, ಮೂರು ದಿನದಲ್ಲಿ ಜಿಲ್ಲಾ ಪಂಚಾಯತ ಕಚೇರಿಗೆ ಸಲ್ಲಿಸುವಂತೆ ಸಿಇಓ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಸ್ತುಪ್ರದರ್ಶನ ಮಳಿಗೆ ಸ್ಥಾಪನೆ ಹಾಗೂ ಸ್ತಬ್ದಚಿತ್ರ ವಿಷಯಗಳ ಕುರಿತು ಸಭೆಯಲ್ಲಿ ವಿವರಿಸಿದರು.
Also read: ಆ.20ರಂದು ವಿಜಯನಗರ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಅಭಿಯಾನ: ಮರಬ್ಬಿಹಾಳದಲ್ಲಿ ಗ್ರಾಮವಾಸ್ತವ್ಯ
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಸಿ.ಕರಿಗೌಡರ, ಶಾಲಾ ಶಿಕ್ಷಣ ಮತ್ತು ಸುಧಾರಣಾ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಬಿಜಾಪುರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಉಮೇಶ ಕೊಂಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ.ಬದ್ರಣ್ಣವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ.ಎಚ್.ಎಚ್.ಕುಕನೂರ, ಸರಕಾರಿ ಚಿತ್ರಕಲಾ ಕಾಲೇಜಿನ ಡಾ.ಬಸವರಾಜ ಕುರಿಯವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಶಿವಾನಂದ ಕಮ್ಮಾರ ಮತ್ತು ತಾರಕೇಶ್ವರ ಸೇರಿದಂತೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post