ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಧಾರವಾಡ ಐಐಟಿ ನೂತನ ಕಟ್ಟಡವನ್ನು ಬರುವ ಜನವರಿ 1,2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರಿಂದ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಮತ್ತು ಗಣಿ, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ Central Minister Pralhad Joshi ಅವರು ಹೇಳಿದರು.
ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದಲ್ಲಿರುವ ಧಾರವಾಡ ಐಐಟಿ ನೂತನ ಕಟ್ಟಡದ ಕಾಮಗಾರಿ ಪರಿಶೀಲನೆ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

Also read: ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು!
ಜನವರಿ ತಿಂಗಳಲ್ಲಿ ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡಮೂರು ಬಾರಿ ವಿವಿಧ ಕಾರ್ಯಕ್ರಮಗಳಿಗಾಗಿ ಆಗಮಿಸಲಿದ್ದಾರೆ. ಆದರೂ ಜನವರಿ 1 ರಂದು ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಆಯೋಜಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.












Discussion about this post