ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡದ ಉದ್ಘಾಟನೆ ಮತ್ತು ಲೋಕಾರ್ಪಣೆಯನ್ನು ನೆಪ್ಟೆಂಬರ್ 26 ರಂದು ಮಧ್ಯಾಹ್ನ 3 ಗಂಟೆಗೆ ಸತ್ತೂರು ಬಳಿಯ ಹೊಚ್ಚಹೊಸ ಕ್ಯಾಂಪಸ್‍ನಲ್ಲಿ ಆಯೋಜಿಸಲಾಗಿದೆ.
ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಸಂಸ್ಥೆಯನ್ನು ಉದ್ಘಾಟಿಸಿಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರದ ಪ್ರತಿನಿಧಿಗಳು, ಕೈಗಾರಿಕಾ ಪಾಲುದಾರರಾದ ಕಿಯಾನಿಕ್ಸ್, ಇನ್ಫೋಸಿಸ್‍ನ ಪ್ರತಿನಿಧಿಗಳು, ಕಾಲೇಜಿನ ಬೋರ್ಡ್ ಆಫ್ ಗವರ್ನರ್ಸ್, ಸೆನಟ್, ಹಣಕಾಸು ಸಮಿತಿ, ಕಟ್ಟಡ ಮತ್ತು ಕಾಮಗಾರಿ ಸಮಿತಿಯವರು, ಪ್ರತಿಷ್ಠಿತ ಸಂಸ್ಥೆಗಳ ಶಿಕ್ಷಣ ತಜ್ಞರು ಮತ್ತು ಉದ್ಯಮಿಗಳು ಕಾರ್ಯಕ್ರಮಕ್ಕೆ ಆಗಮಿಸುವರು.

ಹೊಸ ಹುರುಪಿನಲ್ಲಿ ಆರಂಭವಾದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಧಾರವಾಡಕ್ಕೆ ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ, ಶೈಕ್ಷಣಿಕ ಮತ್ತು ಸಂಶೋಧನಾ ಸಮುದಾಯಕ್ಕೆ ಬದಲಾವಣೆ ತರುವಂತಹ ಅಪರೂಪದ ಅವಕಾಶವನ್ನು ಹೊಂದಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಈಗಾಗಲೇ ಉತ್ತರ ಕರ್ನಾಟಕದಲ್ಲಿ ತಾಂತ್ರಿಕ, ಕೃಷಿ, ವೈದ್ಯಕೀಯ, ಕಾನೂನು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಉತ್ಕøಷ್ಟ ಶೈಕ್ಷಣಿಕ ಸಂಸ್ಥೆಯನ್ನು ಹೊಂದಿದ್ದು, ಶೈಕ್ಷಣಿಕ ನಗರಿ ಎಂದು ಪ್ರಸಿದ್ಧಿ ಪಡೆದಿದೆ. ವಾತಾವರಣದೊಂದಿಗೆ, ಬೆಂಗಳೂರಿಗೂ ಹತ್ತಿರವಾಗಿದ್ದು, ಐಐಐಟಿ ಧಾರವಾಡ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಬೆಳೆಯುತ್ತಿದೆ.
Also read: ಐಐಐಟಿಗೆ ರಾಷ್ಟ್ರಪತಿಗಳ ಭೇಟಿ: ಬುಡಕಟ್ಟು ಆದಿವಾಸಿಗಳ ಭಾಷೆಗಳಿಗೆ ಧ್ವನಿಭಾಷಾನುವಾದ ರೋಬೋಟ್ ಸಂಶೋಧನೆ












Discussion about this post