ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತಮ್ಮ ವಿವಾಹದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳ ಕುರಿತಾಗಿ ಸ್ಪಷ್ಟನೆ ನೀಡಿರುವ ಸ್ಯಾಂಡಲ್’ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ತಮ್ಮ ಮದುವೆ ವಿಚಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬರುತ್ತಿರುವ ಗಾಳಿ ಸುದ್ಧಿಯ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಅಧಿಕೃತ ಖಾತೆಯಲ್ಲಿ ಬರುವವರೆಗೂ ತಮ್ಮ ಕುರಿತಾದ ಯಾವುದೇ ಸುದ್ದಿಯನ್ನು ನಂಬಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
🙏🏻🙂 pic.twitter.com/umOL1bh7QF
— Rachita Ram (@RachitaRamDQ) January 22, 2020
ಇನ್ನು, ಸದ್ಯ ತಮ್ಮ ಮದುವೆ ನಿಶ್ಚಯ ಆಗಿಲ್ಲ. ನಾನು ಮದುವೆ ಆಗುವ ಸಂದರ್ಭದಲ್ಲಿ ಎಲ್ಲರಿಗೂ ತಿಳಿಸಿ, ಗುರುಹಿರಿಯರ ಸಮ್ಮುಖದಲ್ಲಿಯೇ ಆಗುತ್ತೇನೆ. ಈ ವಿಚಾರದಲ್ಲಿ ವದಂತಿಗಳನ್ನು ನಂಬಬೇಡಿ ಎಂದು ವಿನಂತಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post