ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಚೆಕ್ ಬೌನ್ಸ್ #ChequeBounce ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ #RamGopalVarma ಅವರನ್ನು ದೋಷಿ ಎಂದು ನ್ಯಾಯಾಲಯ ಘೋಷಿಸಿದ್ದು, ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.
Also Read>> ಸುಬ್ಬಯ್ಯ ಕಾಲೇಜಿನಲ್ಲಿ ಪ್ರಾಯೋಗಿಕ ಪ್ರಬಂಧ ಮಂಡನೆಗೆ ಅಮೆರಿಕಾ ವೈದ್ಯ ಮಾಡರೇಟರ್
7 ವರ್ಷದ ಹಿಂದೆ ಅಂದರೆ, 2018ರಲ್ಲಿ ಮುಂಬೈನಲ್ಲಿ #Mumbai ರಾಮ್ ಗೋಪಾಲ್ ವರ್ಮಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಮಹೇಶ್ಚಂದ್ರ ಮಿಶ್ರಾ ಎನ್ನುವವರು ನಿರ್ದೇಶಕನ ಮೇಲೆ ದೂರು ದಾಖಲಿಸಿದ್ದರು.
ಅಂದಿನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ನ್ಯಾಯಾಲಯಕ್ಕೆ #Court ಹಾಜರಾಗುವಂತೆ ಸೂಚನೆ ಕೊಟ್ಟಿದ್ದರೂ ಕೂಡ ಅವರು ಹಾಜರಾಗಿರಲಿಲ್ಲ ಎಂದು ವರದಿಯಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿ ಮೂರು ತಿಂಗಳ ಒಳಗಾಗಿ ಮಿಶ್ರಾ ಅವರಿಗೆ 3.72 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಆದೇಶಿಸಿದೆ.
ಒಂದು ವೇಳೆ ಈ ಅವಧಿಯ ಒಳಗಾಗಿ ಹಣ ಪಾವತಿಸಿದೇ ಇದ್ದರೆ 3 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post