No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Wednesday, November 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಪತ್ತು ಎದುರಿಸಲು ಮುನ್ನೆಚ್ಚರಿಕೆಯೇ ಅಸ್ತ್ರ, ಮೊದಲೇ ಸನ್ನದ್ಧರಾಗಿ | ಡಾ. ಶಿಗೆರು ಸುಗನಾಮಿ ಅಭಿಮತ

ಶಿವಮೊಗ್ಗ | ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಪತ್ತು ನಿರ್ವಹಣೆ ಸಮ್ಮೇಳನ-2026ಕ್ಕೆ ಚಾಲನೆ

kalpa News by kalpa News
November 18, 2026
in ಶಿವಮೊಗ್ಗ
0
Disaster Management Preparedness Is Key Dr Shigeru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ನೈಸರ್ಗಿಕ ವಿಕೋಪಗಳು ಹಾಗೂ ತುರ್ತು ವಿಪತ್ತುಗಳ (Disaster Management) ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಜಾಗತಿಕ ಮಟ್ಟದ ಅನುಭವ ಮತ್ತು ಸ್ಥಳೀಯ ಮಟ್ಟದ ಸನ್ನದ್ಧತೆ ಎರಡೂ ಅತ್ಯಂತ ಅಗತ್ಯವಾಗಿದ್ದು, ಯಾವುದೇ ರೀತಿಯ ವಿಪತ್ತನ್ನು ಎದುರಿಸಲು ಮುನ್ನೆಚ್ಚರಿಕೆಯೇ ಪ್ರಮುಖವಾದ ಅಸ್ತ್ರವಾಗಿದೆ ಎಂದು ಜಪಾನ್’ನ ಅಸೋಸಿಯೇಷನ್ ಆಫ್ ಮೆಡಿಕಲ್ ಡಾಕ್ಟರ್ಸ್ ಆಫ್ ಏಷ್ಯಾ ಸಂಸ್ಥೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಡಾ. ಶಿಗೆರು ಸುಗನಾಮಿ ಅಭಿಪ್ರಾಯಪಟ್ಟರು.

ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಜಪಾನ್’ನ ಎಎಂಡಿಎ ಸಹಯೋಗದಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಆಯೋಜಿಸಿರುವ ಎರಡು ದಿನಗಳ ‘ವಿಪತ್ತು ನಿರ್ವಹಣೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನ-2026’ ಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ವಿಪತ್ತು ಸಂಭವಿಸಿದ ಬಳಿಕ ಪರಿಹಾರ ಕಾರ್ಯ ಆರಂಭಿಸುವುದಕ್ಕಿಂತ ಮೊದಲೇ ವೈದ್ಯಕೀಯ ಸಿಬ್ಬಂದಿ, ಸ್ವಯಂಸೇವಕರು ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆಗೆ ಸೂಕ್ತ ತರಬೇತಿ ನೀಡುವ ಮೂಲಕ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಜ್ಜುಗೊಳಿಸಬೇಕು ಎಂದು ಕರೆ ನೀಡಿದರು.

ವಿಪತ್ತು ನಿರ್ವಹಣೆ ಎನ್ನುವುದು ಕೇವಲ ವಿಪತ್ತು ಸಂಭವಿಸಿದ ನಂತರ ಕೈಗೊಳ್ಳುವ ಪರಿಹಾರ ಕಾರ್ಯಗಳಿಗೆ ಸೀಮಿತವಾಗಬಾರದು. ವಿಪತ್ತು ಸಂಭವಿಸುವ ಮುನ್ನವೇ ಅಗತ್ಯ ಸಿದ್ಧತೆ, ತರಬೇತಿ, ಸಂಪನ್ಮೂಲಗಳ ಸಂಗ್ರಹ ಹಾಗೂ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಂಸ್ಥೆಗಳ ಅನುಭವಗಳನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವಿಪತ್ತು ನಿರ್ವಹಣೆಯಲ್ಲಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ ಸೇರಿದಂತೆ ಜಾಗತಿಕ ವೇದಿಕೆಗಳೊಂದಿಗೆ ಸಂಪರ್ಕ ಹೊಂದುವುದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದು ಹಾಗೂ ವೈದ್ಯಕೀಯ ಮತ್ತು ಶೈಕ್ಷಣಿಕ ನಾಯಕತ್ವವನ್ನು ಬೆಳೆಸುವುದು ಅಗತ್ಯವಾಗಿದೆ. ನೈಸರ್ಗಿಕ ವಿಕೋಪಗಳು ಸಂಭವಿಸಿದಾಗ ಸ್ಥಳೀಯ ಆಡಳಿತ, ಸಮುದಾಯದ ನಾಯಕರು ಮತ್ತು ಸ್ವಯಂಸೇವಕರೊಂದಿಗೆ ಉತ್ತಮ ಸಮನ್ವಯ ಸಾಧಿಸಿದರೆ ಪರಿಹಾರ ಹಾಗೂ ವೈದ್ಯಕೀಯ ನೆರವು ಕಾರ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಕೈಗೊಳ್ಳಬಹುದು ಎಂದರು.

ಎಎಂಡಿಎ ಸಂಸ್ಥೆಯು ಹಲವು ವರ್ಷಗಳಿಂದ ವಿವಿಧ ದೇಶಗಳಲ್ಲಿ ವಿಪತ್ತುಗಳ ಸಂದರ್ಭದಲ್ಲಿ ವೈದ್ಯಕೀಯ ನೆರವು, ಆರೋಗ್ಯ ಸೇವೆ ಹಾಗೂ ಮಾನವೀಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಈ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ವಿವಿಧ ದೇಶಗಳ ನಡುವೆ ಸಹಕಾರವನ್ನು ಬಲಪಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದು ವಿವರಿಸಿದರು.PES Shivamogga

ವಿಪತ್ತು ಸಂಭವಿಸುವ ಮುನ್ನವೇ ತರಬೇತಿ ಅಗತ್ಯ

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ. ವಿನಾಯಕ ಮಾತನಾಡಿ, ವಿಪತ್ತು ನಿರ್ವಹಣೆಯಲ್ಲಿ ಜಾಗತಿಕ ತಜ್ಞರ ಅನುಭವ ಹಾಗೂ ತರಬೇತಿ ಮಹತ್ವದ ಪಾತ್ರ ವಹಿಸುತ್ತದೆ. ವಿಪತ್ತು ಸಂಭವಿಸಿದ ನಂತರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವುದಕ್ಕಿಂತ ಮುಂಚಿತವಾಗಿಯೇ ವೈದ್ಯರು, ಶುಶ್ರೂಷಕರು, ಅರೆವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಗತ್ಯ ಕೌಶಲಗಳನ್ನು ಕಲಿಸಬೇಕು. ತುರ್ತು ಸಂದರ್ಭಗಳಲ್ಲಿ ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವ ಸಾಮರ್ಥ್ಯ, ವೈದ್ಯಕೀಯ ಸಂಪನ್ಮೂಲಗಳ ನಿರ್ವಹಣೆ ಮತ್ತು ತಂಡವಾಗಿ ಕಾರ್ಯನಿರ್ವಹಿಸುವ ಕೌಶಲ ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.

ಎಎಂಡಿಎ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ವಿಪತ್ತು ನಿರ್ವಹಣೆಯಲ್ಲಿ ಅನುಸರಿಸುತ್ತಿರುವ ಕಾರ್ಯವಿಧಾನಗಳು ಹಾಗೂ ವಿವಿಧ ದೇಶಗಳಲ್ಲಿ ಪಡೆದಿರುವ ಅನುಭವಗಳು ಈ ಸಮ್ಮೇಳನಕ್ಕೆ ಹೆಚ್ಚಿನ ಮೌಲ್ಯವನ್ನು ನೀಡಲಿವೆ. ಇಂತಹ ಸಮ್ಮೇಳನಗಳು ವೈದ್ಯಕೀಯ ಕ್ಷೇತ್ರದ ತಜ್ಞರು, ಸಂಶೋಧಕರು ಮತ್ತು ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ತಿಳಿದುಕೊಳ್ಳಲು ಉತ್ತಮ ವೇದಿಕೆಯಾಗಲಿವೆ ಎಂದು ಅಭಿಪ್ರಾಯಪಟ್ಟರು.

ಜಾಗತಿಕ ಪರಿಣತಿ-ಸ್ಥಳೀಯ ಅಗತ್ಯಗಳಿಗೆ ಜೋಡಿಸುವ ಆಶಯ

ಸುಬ್ಬಯ್ಯ ಸಂಶೋಧನಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಲತಾ ನಾಗೇಂದ್ರ ಮಾತನಾಡಿ, ಸುಬ್ಬಯ್ಯ ಸಂಶೋಧನಾ ಸಂಸ್ಥೆ ಮತ್ತು ಎಎಂಡಿಎ ನಡುವೆ 2019ರಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದು, ಅಂದಿನಿಂದ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಸಂಸ್ಥೆಯು ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಶೋಧನಾ ಸಂಸ್ಥೆಗಳೊಂದಿಗೆ ಕೈಜೋಡಿಸಿ ವಿವಿಧ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿದೆ. ವೈದ್ಯಕೀಯ ಸಂಶೋಧನೆಗೆ ಉತ್ತೇಜನ ನೀಡುವುದರ ಜೊತೆಗೆ ವಿಪತ್ತು ನಿರ್ವಹಣೆ ಮತ್ತು ಸಮುದಾಯದ ಸನ್ನದ್ಧತೆಯನ್ನು ಬಲಪಡಿಸುವುದು ಸಂಸ್ಥೆಯ ದೂರದೃಷ್ಟಿಯಾಗಿದೆ ಎಂದರು.

ಜಾಗತಿಕ ಮಟ್ಟದಲ್ಲಿ ಲಭ್ಯವಿರುವ ಪರಿಣತಿ ಮತ್ತು ಅನುಭವಗಳನ್ನು ಸ್ಥಳೀಯ ಅಗತ್ಯಗಳೊಂದಿಗೆ ಬೆಸೆಯುವ ಮೂಲಕ ಸಮಾಜಕ್ಕೆ ಉಪಯುಕ್ತವಾಗುವ ಸಂಶೋಧನೆ ಹಾಗೂ ಸೇವೆಗಳನ್ನು ಒದಗಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಎಂಡಿಎ ಜೊತೆಗಿನ ಸಹಕಾರವು ಮಹತ್ವದ ಅವಕಾಶಗಳನ್ನು ಒದಗಿಸಿದೆ ಎಂದು ಹೇಳಿದರು.

ಆಸ್ಪತ್ರೆಗಳ ಸುರಕ್ಷತೆ, ಸನ್ನದ್ಧತೆಗೆ ಆದ್ಯತೆ ನೀಡಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಜಿ ಹಿರಿಯ ಸಲಹೆಗಾರ್ತಿ ಡಾ. ಪೂಜಾ ಸಕ್ಸೇನಾ ಮಾತನಾಡಿ, ವಿಪತ್ತು ನಿರ್ವಹಣೆಯಲ್ಲಿ ಆಸ್ಪತ್ರೆಗಳ ಸುರಕ್ಷತೆ ಮತ್ತು ಸನ್ನದ್ಧತೆ ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಹೇಳಿದರು.Christ King

ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಾಯಾಳುಗಳು ಏಕಕಾಲದಲ್ಲಿ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಆಸ್ಪತ್ರೆಗಳು ಒತ್ತಡವನ್ನು ಸಮರ್ಥವಾಗಿ ನಿಭಾಯಿಸಲು ಮುಂಚಿತವಾಗಿಯೇ ಸಿದ್ಧತೆ ಮಾಡಿಕೊಳ್ಳಬೇಕು. ತುರ್ತು ಚಿಕಿತ್ಸಾ ವ್ಯವಸ್ಥೆ, ವೈದ್ಯಕೀಯ ಉಪಕರಣಗಳು, ಔಷಧಗಳ ಲಭ್ಯತೆ ಮತ್ತು ಅಗತ್ಯ ಸಿಬ್ಬಂದಿಯ ನಿಯೋಜನೆ ಕುರಿತು ಸಮಗ್ರ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

Also Read>> ವಿದೇಶಿ ನೆಲದಲ್ಲಿ ಕುಳಿತು ಭಾರತದ ಆರ್ಥಿಕತೆ ಬಗ್ಗೆ ರಾಹುಲ್ ಗಾಂಧಿ ಟೀಕೆ | ಬಿಜೆಪಿ ಕಿಡಿ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ವೈದ್ಯಕೀಯ ಸಂಪನ್ಮೂಲಗಳ ಸಮರ್ಪಕ ಬಳಕೆ, ಸಿಬ್ಬಂದಿಗೆ ನಿರಂತರ ತರಬೇತಿ ಹಾಗೂ ತುರ್ತು ಸಂದರ್ಭಗಳಲ್ಲಿ ತ್ವರಿತ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವುದು ಅಗತ್ಯವಾಗಿದೆ ಎಂದು ಹೇಳಿದರು.

Disaster Management : 2 ದಿನ, 6 ವಿಭಾಗಗಳಲ್ಲಿ ಪ್ರಾಯೋಗಿಕ ಕಾರ್ಯಾಗಾರ

ಎರಡು ದಿನಗಳ ಈ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ವಿಪತ್ತು ನಿರ್ವಹಣೆಯ ವಿವಿಧ ಆಯಾಮಗಳ ಕುರಿತು ತಜ್ಞರು ವಿಚಾರ ವಿನಿಮಯ ನಡೆಸಲಿದ್ದಾರೆ.
ವಿಪತ್ತು ಅಪಾಯ ಕ್ಷೀಣಗೊಳಿಸುವಿಕೆ, ವಿಪತ್ತು ಪೂರ್ವ ಸನ್ನದ್ಧತೆ, ತುರ್ತು ಪ್ರತಿಸ್ಪಂದನೆ, ಪುನರ್ವಸತಿ, ಸಮುದಾಯದ ಸಹಕಾರ, ಹಾವು ಕಡಿತದ ತುರ್ತು ಚಿಕಿತ್ಸೆ, ವಿಪತ್ತಿನ ಸಂದರ್ಭದಲ್ಲಿ ಮಾನಸಿಕ ಆರೋಗ್ಯ ಮತ್ತು ಮನೋಸಾಮಾಜಿಕ ಬೆಂಬಲ ಸೇರಿದಂತೆ ಹಲವು ಪ್ರಮುಖ ವಿಷಯಗಳು ಸಮ್ಮೇಳನದ ಚರ್ಚೆಯ ಭಾಗವಾಗಿವೆ.

ವಿಶೇಷವಾಗಿ ವಿಪತ್ತುಗಳಿಂದ ಪ್ರಭಾವಿತವಾಗುವ ಜನರಿಗೆ ದೈಹಿಕ ಚಿಕಿತ್ಸೆಯ ಜೊತೆಗೆ ಮಾನಸಿಕ ಆರೋಗ್ಯದ ಆರೈಕೆಯೂ ಅಗತ್ಯವಾಗಿರುವುದರಿಂದ ಈ ಕ್ಷೇತ್ರದ ತಜ್ಞರು ತಮ್ಮ ಅನುಭವ ಮತ್ತು ಸಂಶೋಧನಾ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ.

ಗುರುವಾರದ ಕಾರ್ಯಕ್ರಮ ಏನು?

ಗುರುವಾರ ಸಹ ವಿವಿಧ ತಜ್ಞರ ಗೋಷ್ಠಿಗಳು, ನೀತಿ ಹ್ಯಾಕಥಾನ್, ಸಂಶೋಧನಾ ಪ್ರಬಂಧಗಳ ಮಂಡನೆ, ಪೋಸ್ಟರ್ ಪ್ರಸ್ತುತಿ ಹಾಗೂ ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದ ಅಂಗವಾಗಿ ಆರು ವಿಭಾಗಗಳಲ್ಲಿ ಪ್ರಾಯೋಗಿಕ ಕಾರ್ಯಾಗಾರಗಳನ್ನು ಆಯೋಜಿಸಲಾಗಿದ್ದು, ಭಾಗವಹಿಸುವವರಿಗೆ ವಿಪತ್ತು ನಿರ್ವಹಣೆಯ ನೈಜ ಸವಾಲುಗಳನ್ನು ಎದುರಿಸುವ ಕೌಶಲಗಳನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ.

ಜಪಾನ್ ಎಎಂಡಿಎ ಸಂಸ್ಥೆಯ ಡಾ. ಟೊಮೊಕೊ, ಎಎಂಡಿಎ ಇಂಡಿಯಾ ಅಧ್ಯಕ್ಷ ಡಾ. ಎಂ.ಎಸ್. ಕಾಮತ್, ಡಾ. ರಾಮಚಂದ್ರ ಕಾಮತ್, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಡಾ. ಸೌರಭ್ ದಲಾಲ್, ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿಕಟಪೂರ್ವ ಶೈಕ್ಷಣಿಕ, ಸಂಶೋಧನೆ ಮತ್ತು ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಆರ್.ಪಿ. ಪೈ, ಡಾ. ಕೆ.ಬಿ. ಸಂತೋಷ್, ಡಾ. ಸಂಜೀವ್ ಮಣಿಕಪ್ಪ ಸೇರಿದಂತೆ ಹಲವು ಗಣ್ಯರು, ವೈದ್ಯರು, ಸಂಶೋಧಕರು, ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಮ್ಮೇಳನದ ಮುಖ್ಯ ಪೋಷಕರಾಗಿ ಸುಬ್ಬಯ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಸ್. ನಾಗೇಂದ್ರ ಮತ್ತು ಸುಬ್ಬಯ್ಯ ಸಂಶೋಧನಾ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಲತಾ ಆರ್. ತೆಲಂಗ್ ಕಾರ್ಯನಿರ್ವಹಿಸುತ್ತಿದ್ದಾರೆ.

ಸಂಘಟನಾ ಅಧ್ಯಕ್ಷರಾಗಿ ಡಾ. ನಿರಂಜನ್ ಕಾಂಬ್ಳೆ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಡಾ. ವಿದ್ಯಾ ನಿರಂಜನ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limitedKalpa News Advertising Disclaimer

Tags: Disaster ManagementShivamoggaಜಪಾನ್ನೈಸರ್ಗಿಕ ವಿಕೋಪಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದೇಶಿ ನೆಲದಲ್ಲಿ ಕುಳಿತು ಭಾರತದ ಆರ್ಥಿಕತೆ ಬಗ್ಗೆ ರಾಹುಲ್ ಗಾಂಧಿ ಟೀಕೆ | ಬಿಜೆಪಿ ಕಿಡಿ

kalpa News

kalpa News

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL