ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ #Shivamogga ಲೋಕಸಭಾ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧೆ ಮಾಡಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್, ಪಕ್ಷಕ್ಕೆ ಮುಜುಗರ ತಂದ ಹಿನ್ನೆಲೆಯಲ್ಲಿ ಈಶ್ವರಪ್ಪ ಅವರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದಿದ್ದಾರೆ.

ಪಕ್ಷದ ಸೂಚನೆಯನ್ನು ಕಡೆಗಣಿಸಿ ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಫರ್ಧಿಸಿರುವುದು ಬಿಜೆಪಿಗೆ ಮುಜುಗರಕ್ಕೆ ಕಾರಣವಾಗಿದೆ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ತತಕ್ಷಣವೇ ಈಶ್ವರಪ್ಪ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಛಾಟನೆ ಮಾಡಿ, ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಅವರನ್ನು ಮುಕ್ತಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























