No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಶಿಕ್ಷಕರಿಂದ ಉಪನ್ಯಾಸಕರ ಹುದ್ದೆಗೆ ಬಡ್ತಿ ನಿಯಮದಲ್ಲಿ ತಾರತಮ್ಯ: ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 7, 2023
in ರಾಜಕೀಯ
0
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ (ಸುವರ್ಣ ಸೌಧ)  |

ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ #Lecturer ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ #Belagavi ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ #MadhuBangarappa ತಿಳಿಸಿದರು.

ಅವರು ಇಂದು ವಿಧಾನ ಪರಿಷತ್‌ನಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಶಿಕ್ಷಕರಿಗೆ #Teacher ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ನೀಡುವಲ್ಲಿ ಒಂದು ನಿಯಮ, ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಬಡ್ತಿ ನೀಡುವಲ್ಲಿ ಮತ್ತೊಂದು ನಿಯಮ ರೂಪಿಸಿ ತಾರತಮ್ಯ ಉಂಟು ಮಾಡಿರುವ ಗಂಭೀರ ಸಮಸ್ಯೆ ಕುರಿತ ಗಮನ ಸೆಳಯುವ ಸೂಚನೆಗೆ ಉತ್ತರಿಸಿ ಮಾತನಾಡಿದರು.
ಪ್ರಸ್ತುತ ಪ್ರೌಢಶಾಲಾ #HighSchool ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಸಹ ಶಿಕ್ಷಕರಾಗಿ 10 ವರ್ಷಗಳ ಅರ್ಹತಾದಾಯಕ ಸೇವೆಯನ್ನು ಪೂರೈಸಿರಬೇಕು. ಒಂದು ವೇಳೆ 10 ವರ್ಷ ಪೂರೈಸಿರುವವರು ಲಭ್ಯವಿಲ್ಲದಿದ್ದಲ್ಲಿ 7 ವರ್ಷ ಸೇವೆ ಪೂರೈಸಿರುವವರನ್ನು ಬಡ್ತಿಗೆ ಪರಿಗಣಿಸಲಾಗುವುದು.

ಪ್ರಸ್ತುತ ಚಾಲ್ತಿಯಲ್ಲಿರುವ 2014 ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಉಪನ್ಯಾಸಕ ವೃಂದದಲ್ಲಿ ನೇರ ನೇಮಕಾತಿಗೆ ಶೇ.74 ಮತ್ತು ಶೇ.1ರಷ್ಟು ಸೇವಾ ನಿರತ ಸಿ ಗುಂಪಿನ ನೌಕರರಿಗೆ ಹಾಗೂ ಶೇ.25 ರಷ್ಟು ಸೇವಾ ನಿರತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಅರ್ಹತಾದಾಯಕ ಪರೀಕ್ಷೆ ಉತ್ತೀರ್ಣರಾಗುವ ಷರತ್ತಿನಂತೆ ಅನುಪಾತವನ್ನು ಹಂಚಿಕೆ ಮಾಡಿ ಬಡ್ತಿ ಕಲ್ಪಿಸಲಾಗಿದೆ ಎಂದರು.
2014 ರ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಅರ್ಹತದಾಯಕ ಪರೀಕ್ಷೆ ಉತೀರ್ಣರಾಗಬೇಕು ಎಂಬ ಷರತ್ತುಗಳ ಕಾರಣ ಕಳೆದ 9 ವರ್ಷಗಳಿಂದ ಯಾವುದೇ ಪ್ರೌಢಶಾಲಾ ಸಹ ಶಿಕ್ಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಸಾಧ್ಯವಾಗಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವಾಗ ಶೇ.50ರಷ್ಟು ನೇರ ನೇಮಕಾತಿ ಮತ್ತು ಶೇ.50ರಷ್ಟು ಸೇವಾ ನಿರತರಿಗೆ ನಿಗಧಿಪಡಿಸಿದ್ದು, ಯಾವುದೇ ಅರ್ಹತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ. ಒಂದೇ ಇಲಾಖೆಯಲ್ಲಿ ಬಡ್ತಿಗಾಗಿ ಈ ರೀತಿಯಾಗಿ ತಾರತಮ್ಯ ಇರುವುದರಿಂದ ಇದನ್ನು ಸರಿಪಡಿಸುವಂತೆ ಶಾಸಕ ಮರಿತಿಬ್ಬೇಗೌಡ ಅವರಿಗೆ ಪೂರಕವಾಗಿ ಸದಸ್ಯರಾದ ಡಾ. ವೈ.ಎ. ನಾರಾಯಣ ಸ್ವಾಮಿ, ಶಶೀಲ್ ನಮೋಶಿ, ಭೋಜೇಗೌಡ, ಸಂಕನೂರ್ ಹಾಗೂ ತೇಜಸ್ವಿನಿ ಗೌಡ ಮಾತನಾಡಿದರು.

ಈ ಸಮಸ್ಯೆಯ ಕುರಿತಂತೆ ಶಿಕ್ಷಕರೂ ಕೂಡಾ ತಮ್ಮ ಗಮನಕ್ಕೆ ತಂದಿದ್ದು, ಈ ಬಗ್ಗೆ ಪ್ರಸಕ್ತ ಅಧಿವೇಶನ ಮುಗಿಯುವ ಒಳಗೆ, ಅಗತ್ಯ ಬದಲಾವಣೆಗಳ ಬಗ್ಗೆ ವಿಶೇಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BelagaumBelagaviKannada News WebsiteLatest News KannadaMadhu BangarappaPolitical Newsಉಪನ್ಯಾಸಕಎಸ್.ಮಧು ಬಂಗಾರಪ್ಪನೇಮಕಾತಿ ನಿಯಮಪದವಿ ಪೂರ್ವ ಶಿಕ್ಷಣ ಇಲಾಖೆಬಡ್ತಿಬೆಳಗಾವಿಸಹ ಶಿಕ್ಷಕ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಅರಣ್ಯ ಭೂಮಿ ಒತ್ತುವರಿ | ಅರಣ್ಯ ಸಚಿವರು ಹೇಳಿದ್ದೇನು?

Next Post

ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಘನತೆ ಮೆರೆದ ರಾಜವಂಶಸ್ಥ ಯದುವೀರ ದಂಪತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಘನತೆ ಮೆರೆದ ರಾಜವಂಶಸ್ಥ ಯದುವೀರ ದಂಪತಿ

ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಘನತೆ ಮೆರೆದ ರಾಜವಂಶಸ್ಥ ಯದುವೀರ ದಂಪತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL