ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾರಕ ಕೊರೋನಾ ವೈರಸ್’ಗೆ ಇಡಿಯ ವಿಶ್ವವೇ ತತ್ತರಿಸಿ ಹೋಗುತ್ತಿದ್ದರೆ, ಜಿಲ್ಲೆಯ ಈ ಜನಕ್ಕೆ ಇನ್ನೂ ಬುದ್ದಿ ಬಂದಿಲ್ಲ.
ಸೋಂಕು ತಡೆಗಟ್ಟಲು ಲಾಕ್ ಡೌನ್ ಹಾಗೂ ನಿಷೇಧಾಜ್ಞೆ ಆದೇಶ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಆಯನೂರು ಸಮೀಪದ ಕೆಸವಿನಕಟ್ಟೆಯ ಮಸೀದಿಯಲ್ಲಿ ನಮಾಜ್ ನಡೆಸಿದ 77 ಮಂದಿಯಲ್ಲಿ ಈಗ 7 ಮಂದಿ ಜ್ವರದಿಂದ ಬಳಲುತ್ತಿದ್ದಾರೆ.
ಶುಕ್ರವಾರದ ಇಂದಿನ ನಮಾಜ್’ನಲ್ಲಿ ಪಾಲ್ಗೊಂಡ 77 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇವರನ್ನೆಲ್ಲಾ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇದರಲ್ಲಿ ಏಳು ಮಂದಿ ಈಗಾಗಲೇ ಜ್ವರದಿಂದ ಬಳಲುತ್ತಿದ್ದು, ಇವರನ್ನೆಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂಸಿ ಠಾಣೆ ಸಬ್ ಇನ್ಸ್‌ಪೆಕ್ಟರ್ ನವೀನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Get in Touch With Us info@kalpa.news Whatsapp: 9481252093
Discussion about this post