ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್’ಗೆ ಮೃತರಾದ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಉದ್ದೇಶ ಪೂರ್ವಕವಾಗಿ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತಂತೆ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್. ವಟಾರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು, ಈಗಾಗಲೇ ಜುಲೈ 11ರಂದು ಶಿವಮೊಗ್ಗ ನಗರ ವ್ಯಾಪ್ತಿಯ ರಾಜೀವ್‌ಗಾಂಧಿ ಬಡಾವಣೆಯಲ್ಲಿರುವ ಪಾಲಿಕೆಯ ಚಿತಾಗಾರದ ಬಳಿ ಕೊರೋನ ಪೀಡಿತನ ಮೃತದೇಹದ ಅಂತ್ಯಸಂಸ್ಕಾರಕ್ಕೆಂದು ತೆರಳಿದಾಗ ಕೆಲವು ಸಾರ್ವಜನಿಕರು ಉದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಹಿನ್ನೆಲೆಯಲ್ಲಿ ಕೋಟೆ ಪೊಲೀಸ್ ಠಾಣೆಯಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಐಪಿಸಿ. ಸೆಕ್ಷನ್ 1860 ಯು/ಎಸ್ 143, 341, 353, 269, 270 ಮತ್ತು 149ರೀತ್ಯಾ ಕೇಸ್ ದಾಖಲಿಸಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, ಕೋವಿಡ್-19 ಸೋಂಕಿನಿಂದ ಮೃತರಾದ ವ್ಯಕ್ತಿಗಳ ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಆದಾಗ್ಯೂ ಮೃತ ದೇಹಗಳ ಶವಸಂಸ್ಕಾರ ನಡೆಸಲು ಕೆಲವು ಭಾಗಗಳಲ್ಲಿ ಅಲ್ಲಿನ ಸಾರ್ವಜನಿಕರು ಅಡಚಣೆ ಉಂಟು ಮಾಡುತ್ತಿರುವುದಲ್ಲದೆ ಅಸಹಕಾರ ತೋರುತ್ತಿದ್ದು, ಸಾಮಾಜಿಕ ಜಾಲತಾಣಗಳ ಮುಖಾಂತರ ಕಾನೂನಿಗೆ ವಿರುದ್ಧವಾಗಿ ಸುಳ್ಳುಸುದ್ದಿ ಹಬ್ಬಿಸುವ ಚಟುವಟಿಕೆಯಲ್ಲಿ ತೊಡಗಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಹಾಗೂ ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಡಿಯಲ್ಲಿ ಅವಕಾಶವಿದೆ ಎಂದು ತಿಳಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post