ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಕೋವಿಡ್-19 ಸೋಂಕು ಪಸರಿಸದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಎ. 14 ರವರೆಗೆ ಲಾಕ್‌ಡೌನ್ ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು.
ಕೂಲಿ ಕಾರ್ಮಿಕರಿಗೆ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದ್ದು, ಈ ದಿಸೆಯಲ್ಲಿ ಜಿಲ್ಲಾಧಿಕಾರಿಗಳು ಚಿತ್ರದುರ್ಗ ನಗರದ ಆರಾಮ್ ವಿಹಾರ್ ಗ್ರೂಪ್ ಸಹಕಾರದೊಂದಿಗೆ ಕೂಲಿ ಕಾರ್ಮಿಕರಿಗೆ ಉಚಿತವಾಗಿ ದಿನನಿತ್ಯದ ಅಗತ್ಯದ ಆಹಾರ ಸಾಮಗ್ರಿ ಒಳಗೊಂಡ ಕಿಟ್‌ಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿತರಣೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಸಂಗಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವಿನ್ ಸೇರಿದಂತೆ ವಿಹಾರ್ ಗ್ರೂಪ್‌ನ ಸದಸ್ಯರು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093















