ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ತಾಲೂಕಿನ ವೇದಲವೇಣಿ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ತರಕಾರಿ ವಿತರಣೆಗೆ ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ಬುಧವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿನ ರೈತರು ಬೆಳೆದಿರುವ ತರಕಾರಿಗಳನ್ನು ಸ್ಥಳೀಯ ಮುಖಂಡರು ಮಾರುಕಟ್ಟೆ ಬೆಲೆಗೆ ಖರೀದಿಸಿ ತಾಲೂಕು ಆಡಳಿತದ ವತಿಯಿಂದ ಗ್ರಾಮಗಳಲ್ಲಿನ ಪ್ರತೀ ಮನೆಗಳಿಗೆ ವಿತರಣೆ ಮಾಡಲಾಗುವುದು. ಸಂಕಷ್ಟದ ಪರಿಸ್ಥಿಯಲ್ಲಿ ಜನತೆಗೆ ಆಸರೆಯಾಗುವ ನಿಟ್ಟಿನಲ್ಲಿ ತಾಲೂಕು ಆಡಳಿತವು ಈ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯವಾದುದು ಎಂದರು.
ಗ್ರಾಮದಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ನೌಕರರು ಸೇರಿದಂತೆ ಇತರರಿಗೂ ತರಕಾರಿ ಕಿಟ್ ವಿತರಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ವೇದಲವೇಣಿ ವೇಣು, ಎಪಿಎಂಸಿ ಮಾಜಿ ಉಪಾಧ್ಯಕ್ಷರಾದ ಮಲ್ಲಿಕಾರ್ಜುನಪ್ಪ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ಮೃತ್ಯುಂಜಯಪ್ಪ, ಎಂ.ಸಿ. ಗಂಗಪ್ಪ, ಲಕ್ಷ್ಮಮ್ಮ, ಸೋಮಕ್ಕ, ಚಿಕ್ಕನರಸರೆಡ್ಡಿ, ಅಶೋಕ್, ಪಿಡಿಒ ಚನ್ನಕೃಷ್ಣಪ್ಪ, ರಾಜಸ್ವ ನಿರೀಕ್ಷಕರಾದ ಮಂಜುನಾಥ್ ಹಾಗೂ ಗ್ರಾಮದ ಸ್ವಯಂ ಸೇವಕರಾದ ವೇದಲವೇಣಿ ಗ್ರಾಮದ ಸ್ಟಾರ್ ಗಾಯ್ಸ್ ತಂಡದ ಸದಸ್ಯರು ಇದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post