ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳು ಸೇರಿದಂತೆ ಎಲ್ಲ ಕಡೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭದ್ರಾ ಜಲಾಶಯ ಹಿನ್ನೀರು ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಾಗಿದೆ. ಜಲಾಶಯದ ಒಳ ಹರಿವು ಹಾಗೂ ಹೊರ ಹರಿವಿನ ಬಗ್ಗೆ ಮಾಹಿತಿ ಪಡೆದು ಕಳೆದ ಸಾಲಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ಮಾಹಿತಿ ಪಡೆದು ಪ್ರಸಕ್ತ ಸಾಲಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ. ಈ ಕುರಿತಂತೆ ಯೋಜನೆಗಳನ್ನು ರೂಪಿಸಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.
Get In Touch With Us info@kalpa.news Whatsapp: 9481252093
















