ಕಲ್ಪ ಮೀಡಿಯಾ ಹೌಸ್ | ತುಮಕೂರು |
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟದಲ್ಲಿ ಶಿವಮೊಗ್ಗ #Shivamogga ಜಿಲ್ಲೆಯ ಕ್ರೀಡಾಪಟುಗಳು ಶೋಭಿಸಿದರು.
ಜನವರಿ 18 ರಿಂದ 20 ರವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರತಿನಿಧಿಸಿದ ಶ್ರೀಮತಿ ಮೀನಾಕ್ಷಿ 57-60 ಕೆಜಿ ತೂಕದ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮೊದಲ ಬಾರಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಯೋಗಾನಂದ +90 ಕೆಜಿ ತೂಕದ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಇವರೊಂದಿಗೆ ದಿಗಂತ್ ಮತ್ತು ಶೇಕ್ ಮೊಹಮ್ಮದ್ ಸಾದ್ ಉತ್ತಮ ಪ್ರದರ್ಶನ ನೀಡಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆಯನ್ನು ತುಮಕೂರು #Tumkur ಜಿಲ್ಲಾಧಿಕಾರಿ ಶುಭಕಲ್ಯಾಣ ಮಾಡಿದರು.
ಈ ಸಂದರ್ಭದಲ್ಲಿ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್, ತುಮಕೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ತುಮಕೂರು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಕುಮಾರ್ ಇದ್ದರು.
ವಿಶೇಷವಾಗಿ ಶಿವಮೊಗ್ಗದಿಂದ ಈ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಪ್ರೀತಿ ಶ್ರೀ ಭಾಗವಹಿಸಿದ್ದರು ಮತ್ತು ಕೋಚ್ ಆಗಿ ಸಚಿನ್ ಟಿ ಎಸ್ ಇದ್ದರು. ವಿಜೇತ ಕ್ರೀಡಾಪಟುಗಳಿಗೆ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಶುಭ ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















