No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಕಾನೂನು ಕಲ್ಪ

ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಟ್ಟು ಮದುವೆಯಾದರೆ ವಿಚ್ಛೇದನ ನೀಡಬಹುದು | ಛತ್ತೀಸ್’ಗಡ ಹೈಕೋರ್ಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2025
in ಕಾನೂನು ಕಲ್ಪ
0
ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಟ್ಟು ಮದುವೆಯಾದರೆ ವಿಚ್ಛೇದನ ನೀಡಬಹುದು | ಛತ್ತೀಸ್’ಗಡ ಹೈಕೋರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |ತನಗಿದ್ದ ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಮಹಿಳೆಯೊಬ್ಬಳು ವಿವಾಹದ ಸಮಯದಲ್ಲಿ ಮುಚ್ಚಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನೀಡಿದ ಡೈವೋರ್ಸ್ ಆದೇಶವನ್ನು ಛತ್ತೀಸ್ ಗಡದ ಹೈಕೋರ್ಟ್ ಎತ್ತಿ ಹಿಡಿದಿದೆ.

ಸದರಿ ಪ್ರಕರಣದ ದಂಪತಿಗಳ ನಡುವಿನ ವಿವಾಹ ಛತ್ತೀಸ್ ಗಡದ ಖೈರಾಗರ್ ನಗರದಲ್ಲಿ 2015ರ ಇಸವಿಯಲ್ಲಿ ನೆರವೇರಿತ್ತು. ವಿವಾಹವಾದ ಕೆಲವೇ ದಿವಸಗಳಲ್ಲಿ ದಂಪತಿಗಳ ನಡುವೆ ತೀವ್ರ ಮನಸ್ತಾಪ ತಲೆದೋರಿ, ಪತಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಪತ್ನಿ ತನಗಿರುವ ಋತುಚಕ್ರ, ಮುಟ್ಟು ಹಾಗು ಇತರೆ ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಟ್ಟು ಮದುವೆಯಾಗಿದ್ದಾರೆ ಎಂದು ಪತಿ ಆರೋಪಿಸಿದ್ದರು. ಪರಸ್ಪರ ನಂಬಿಕೆ ವೈವಾಹಿಕ ಸಂಬಂಧಕ್ಕೆ ಭದ್ರ ಬುನಾದಿ ಕಲ್ಪಿಸುತ್ತದೆ. ಅರೋಗ್ಯ ಸಮಸ್ಯೆಗಳನ್ನು ಮುಚ್ಚಿಟ್ಟು ಮದುವೆಯಾಗಿರುವುದರಿಂದ ಇಬ್ಬರ ನಡುವೆ ವಿಶ್ವಾಸಕ್ಕೆ ಧಕ್ಕೆ ಬಂದಿದೆ ಎಂದು ಪತಿ ಹೇಳಿಕೊಂಡಿದ್ದರು.

ಹೀಗೆ ವಾಸ್ತವಾಂಶಗಳನ್ನು ಅಡಗಿಸಿ ಮದುವೆಯಾಗಿರುವುದು ಕ್ರೌರ್ಯವಾಗಿದ್ದು, ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 13 ಅಡಿಯಲ್ಲಿ ವಿಚ್ಛೇದನ ನೀಡಬೇಕೆಂದು ಕೋರಲಾಗಿತ್ತು. ಮೇಲಾಗಿ ಸೆಪ್ಟೆಂಬರ್ 2016ರ ತರುವಾಯ ಪತ್ನಿ ತನ್ನ ತವರು ಮನೆಯಲ್ಲಿ ನೆಲೆಸುತ್ತಿದ್ದು, ದಾಂಪತ್ಯ ಸಂಪೂರ್ಣ ಮುರಿದು ಬಿದ್ದಿದೆ ಎಂದು ವಾದಿಸಿದ್ದರು.

ಪತ್ನಿ ಪರ ವಕೀಲರು ಮಹಿಳೆಗಿರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಶಾಶ್ವತವಲ್ಲ. ಇವಕ್ಕೆ ವೈದ್ಯಕೀಯ ಚಿಕಿತ್ಸೆ ಇದೆ. ಈಗಾಗಲೇ ಔಷದ ಹಾಗು ಯೋಗಾಭ್ಯಾಸದ ಮೂಲಕ ಸಮಸ್ಯೆ ಪರಿಹಾರಕ್ಕೆ ನನ್ನ ಕಕ್ಷಿದಾರರು ಪ್ರಯತ್ನಿಸುತ್ತಿದ್ದಾರೆ. ಗಂಡನ ಮನೆಯವರು ನನ್ನ ಕಕ್ಷಿದಾರರನ್ನು ಬಂಜೆ ಎಂದು ಹೀಯಾಳಿಸುತ್ತಿದ್ದಾರೆ ಎಂದು ತಿಳಿಸಿದ್ದರು.
ಸಾಕ್ಷಿಗಳನ್ನು ಪರಿಗಣನೆಗೆ ತೆಗೆದುಕೊಂಡ ಕೆಳ ನ್ಯಾಯಾಲಯ ವಿಚ್ಛೇದನ ಮಂಜೂರು ಮಾಡಿತು.

ಈ ಆದೇಶದ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಮಹಿಳೆ, ವಿಚಾರಣಾ ನ್ಯಾಯಾಲಯ ವೈದ್ಯಕೀಯ ಸಾಕ್ಷಿಗಳನ್ನು ಸರಿಯಾಗಿ ಗಮನಿಸಿಲ್ಲ ಹಾಗು ಯಾವುದೇ ತಜ್ಞ ವೈದ್ಯರ ಅಭಿಪ್ರಾಯ ಪಡೆಯದೇ ಆದೇಶ ನೀಡಲಾಗಿದೆ ಎಂದು ವಾದಿಸಿದ್ದರು. ಮಕ್ಕಳಾಗದಿರುವ ವೈದ್ಯಕೀಯ ಸಮಸ್ಯೆಯನ್ನು ಮುಚ್ಚಿಡುವದು ಕ್ರೌರ್ಯದ ವ್ಯಾಖ್ಯಾನದ ಒಳಗೆ ಬರುವುದಿಲ್ಲ ಎಂದೂ ವಾದಿಸಿದ್ದರು.

ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ರಜನಿ ದುಬೆ ಹಾಗು ನ್ಯಾಯಮೂರ್ತಿ ಆಮಿತೀಂದ್ರ ಕಿಶೋರ್ ಪ್ರಸಾದ್ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ, ಮೇಲ್ಮನಿವಿಯನ್ನು ತಿರಸ್ಕರಿಸಿ, ವಿಚಾರಣಾ ನ್ಯಾಯಾಲಯ ನೀಡಿದ ವಿಚ್ಛೇದನದ ಆದೇಶವನ್ನು ಎತ್ತಿ ಹಿಡಿದಿದೆ. ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಂತಾನೋತ್ಪತ್ತಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಟ್ಟಿರುವುದು ಹಾಗು ಪತಿಯೊಂದಿಗಿನ ಪತ್ನಿಯ ನಡವಳಿಕೆ ಗಮನಿಸಿದರೆ, ಕ್ರೌರ್ಯದ ಆರೋಪ ಸಾಬೀತಾಗುತ್ತದೆ ಎಂದು ತಿಳಿಸಿದೆ. ಜೊತೆಗೆ ಇಬ್ಬರ ಸಾಮಾಜಿಕ ಹಾಗು ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ, ಹೈಕೋರ್ಟ್ ಪತಿಗೆ 5 ಲಕ್ಷ ರೂಪಾಯಿ ಹಣವನ್ನು ಪತ್ನಿಗೆ ಶಾಶ್ವತ ಜೀವನಾಂಶವಾಗಿ ನೀಡಲು ಆದೇಶಿಸಿದೆ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Advocate VeerendraKannada News WebsiteKanunu KalpaLatest News KannadaLegal adviceLegal HelpReproductionಆರೋಗ್ಯ ಸಮಸ್ಯೆಕಾನೂನು ಕಲ್ಪಛತ್ತೀಸ್ ಗಡದ ಹೈಕೋರ್ಟ್ವಿವಾಹಸಂತಾನೋತ್ಪತ್ತಿ
Share196Tweet123Send
Previous Post

ಭಕ್ತಿಯಿಂದ ಭಜಿಸಿ ಶ್ರೀಕೃಷ್ಣನ ಅನುಗ್ರಹ ಪಡೆಯಿರಿ: ಶ್ರೀ ಅಕ್ಷೋಭ್ಯ ರಾಮಪ್ರಿಯ ತೀರ್ಥರ ಆಶೀರ್ವಚನ

Next Post

ಐತಿಹಾಸಿಕ ದಾಖಲೆ ಬರೆದ ಭಾರತೀಯ ರೈಲ್ವೆ | 180 ಕಿಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು-ಎರ್ನಾಕುಲಂ ನಡುವೆ ಹೊಸ ವಂದೇ ಭಾರತ್ ರೈಲು ಆರಂಭ | ಹೀಗಿದೆ ವೇಳಾಪಟ್ಟಿ

ಐತಿಹಾಸಿಕ ದಾಖಲೆ ಬರೆದ ಭಾರತೀಯ ರೈಲ್ವೆ | 180 ಕಿಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

April 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

April 15, 2026
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

April 15, 2026
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

April 15, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL