ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೀಪಾವಳಿ ಹಬ್ಬಕ್ಕೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟಿದ್ದು, ತುಟ್ಟಿ ಭತ್ಯೆ ಏರಿಸಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ತನ್ನ ನೌಕರರಿಗೆ ದೀಪಾವಳಿಗೂ ಮುನ್ನ ಶೇ. 2ರಷ್ಟು ತುಟ್ಟಿ ಭತ್ಯೆ #DAHike ಹೆಚ್ಚಳ ಮಾಡಿದೆ.
ಇದೇ ವರ್ಷದ ಜುಲೈ 1ರಿಂದಲೇ ಪೂವಾನ್ವಯವಾಗುವಂತೆ ತುಟ್ಟಿಭತ್ಯೆಯ ದರಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದೆ. ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿದೆ.

ವಿಜಯದಶಮಿಗೂ ಮುನ್ನ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳವನ್ನು ಘೋಷಿಸಿತ್ತು. ತನ್ನ ನೌಕರರಿಗೆ ದಸರಾ ಉಡುಗೊರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹೆಚ್ಚುವರಿ ಶೇ.3ರಷ್ಟು ತುಟ್ಟಿ ಭತ್ಯೆ ನೀಡಲು ಸಮ್ಮತಿ ಸೂಚಿಸಿತ್ತು.
ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ನೀಡಲು ಅನುಮೋದನೆ ನೀಡಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post