ಬೆಂಗಳೂರು: ನಮ್ಮ ಸಮಾಜದ ಉತ್ತಮ ಜನಪ್ರತಿನಿಧಿಗಳ ಆಯ್ಕೆಯಾಗಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾವಣೆ ಮಾಡಿ ಎಂದು ಆರ್.ಜೆ. ರಾಪಿಡ್ ರಶ್ಮಿ ಕರೆ ನೀಡಿದರು.
ಬಿಎಂಎಸ್’ಐಟಿ ಕಾಲೇಜು ವಾರ್ಷಿಕೋತ್ಸವ ಉತ್ಸಾಹ-2019ರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡಿ ಎಂದರು.

ಆರ್’ಜೆ ನಿರಂಜನ್ ದೇಶಪಾಂಡೆ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿ ಜೀವನದ ಒಂದು ಅವಿಭಾಜ್ಯ ಅಂಗ, ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಯನ್ನು ಗುರುತಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಾರೆ ಎಂದರು.

ನಂತರ ರಾಪಿಡ್ ರಶ್ಮಿ ತಮ್ಮ ಆಲ್ಬಮ್ ಇಂಡಿಪೆಂಡೆಂಟ್-ಟು ಎಂಬ ಹಾಡೊಂದನ್ನು ಬಿಡುಗಡೆಗೊಳಿಸಿದರು.

ಕರ್ನಾಟಕ ಸರ್ಕಾರದ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಮಾತನಾಡಿ, ಜನರು ಅತ್ಯಂತ ಪ್ರಜ್ಞಾವಂತರಾಗಿ ಮತ ಚಲಾಯಿಸಬೇಕು. ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುತ್ತಿರುವುದು ಸಂತಸ ವಿಷಯ. ಸೃಜನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
ಗೌತಮ್ ಕಳತ್ತೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

















