ಶಿವಮೊಗ್ಗ: ರಾಜ್ಯ ಮೈತ್ರಿ ಸರ್ಕಾರದ ಸಾಲಮನ್ನಾ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿ ಈವರೆಗೂ 5004 ಫಲಾನುಭವಿಗಳ 2170.89 ಲಕ್ಷ ರೂ.ಗಳ ಮೊತ್ತದ ಸಾಲಮನ್ನಾ ಆಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ದಯಾನಂದ್ ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಸಾಲಮನ್ನಾ ಯೋಜನೆಯಡಿ 33886 ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಈ ವರೆಗೆ 5004 ಫಲಾನುಭವಿಗಳ 2170.89 ಲಕ್ಷ ರೂ. ಮೊತ್ತದ ಸಾಲ ಮನ್ನಾ ಮಾಡಲಾಗಿದೆ. ಹಂತ ಹಂತವಾಗಿ ಸಾಲ ಮನ್ನಾ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಸಂಪೂರ್ಣ ಸಾಲಮನ್ನಾಕ್ಕಾಗಿ 13938.59 ಲಕ್ಷ ರೂ. ಅನುದಾನ ಅಗತ್ಯವಿದೆ ಎಂದವರು ತಿಳಿಸಿದರು.
(ವರದಿ: ಡಾ.ಸುಧೀಂದ್ರ)
Discussion about this post