ಶಿವಮೊಗ್ಗ: ನಗರದಲ್ಲಿ ಲಾಕ್ ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಇಂದೂ ಸಹ ಹಲವು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 6, ವಿನೋಬನಗರ ಪೊಲೀಸ್ ಠಾಣೆಯಲ್ಲಿ 2, ಕೋಟೆ ಪೊಲೀಸ್ ಠಾಣೆಯಲ್ಲಿ 5, ಜಯನಗರ ಪೊಲೀಸ್ ಠಾಣೆಯಲ್ಲಿ 5, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2, ತುಂಗಾನಗರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.
ಇನ್ನು, ಆಕ್ಸಿಜನ್ ಸಿಲಿಂಡರ್’ಗಳನ್ನು ಕಾಳ ಸಂತೆಯಲ್ಲಿ ಮಾರುತ್ತಿದ್ದ ಸಿಲಿಂಡರ್ ಡೀಲರ್ ಕಂಪನಿಗಳ ವಿರುದ್ಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ಸೇರಿ ಒಟ್ಟು 23 ಪ್ರಕರಣಗಳು ದಾಖಲಾಗಿವೆ.
ಹಾಗೆಯೇ, ನಿಯಮ ಉಲ್ಲಂಘನೆ ಮಾಡಿದ ವಾಹನ ಸವಾರರ ಒಟ್ಟು 61 ವಾಹನಗಳನ್ನು (54 ದ್ವಿ ಚಕ್ರ ವಾಹನಗಳು ಮತ್ತು 07 ಕಾರುಗಳನ್ನು) ವಶಪಡಿಸಿಕೊಳ್ಳಲಾಗಿದ್ದು, ಒಟ್ಟು 94 ಪ್ರಕರಣಗಳನ್ನು ದಾಖಲಿಸಿ 44,200 ರೂ. ದಂಡವನ್ನು ವಿಧಿಸಲಾಗಿದೆ.
Discussion about this post