No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬೆಂಗಳೂರಿನ ಶ್ರೀ ಗಾಳಿ ಆಂಜನೇಯ ಸ್ವಾಮಿ ಶಕ್ತಿ ವಿಶೇಷತೆ ನಿಮಗೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2019
in Special Articles
0
ಬೆಂಗಳೂರಿನ ಶ್ರೀ ಗಾಳಿ ಆಂಜನೇಯ ಸ್ವಾಮಿ ಶಕ್ತಿ ವಿಶೇಷತೆ ನಿಮಗೆ ಗೊತ್ತಾ?
Share on FacebookShare on TwitterShare on WhatsApp

ನೀವು ಬೆಂಗಳೂರಿನವರಾಗಿದ್ದರೆ ಮೈಸೂರು ರಸ್ತೆಯಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಒಮ್ಮೆಯಾದರೂ ಭೇಟಿ ನೀಡಿಯೇ ಇರುತ್ತೀರಿ ಅಥವಾ ನೀವು ಇಲ್ಲಿಗೆ ಇನ್ನೂ ಭೇಟಿ ನೀಡಿಲ್ಲವಾದರೆ, ದೇವಾಲಯದ ವಿಶೇಷತೆ ಹಾಗೂ ಸ್ವಾಮಿಯ ಶಕ್ತಿ ಎಂತಹುದ್ದು ಎಂಬುದನ್ನು ಕಲ್ಪ ನ್ಯೂಸ್ ಓದುಗರಿಗೆ ತಿಳಿಸುವ ಸಲುವಾಗಿ ದೇವಾಲಯದ ಪ್ರಧಾನ ಆಗಮಿಕರಾದ ಡಾ.ಬಿ.ವಿ. ಶ್ರೀನಿವಾಸ ರಾಮಾನುಜ ಭಟ್ಟಾಚಾರ್ಯ ಅವರೊಂದಿಗೆ ತೀರ್ಥಹಳ್ಳಿ ಅನಂತ ಕಲ್ಲಾಪುರ ಅವರು ಸಂದರ್ಶನ ನಡೆಸಿದ್ದು, ಇದರ ಮಾಹಿತಿಯನ್ನು ಮುಂದೆ ಓದಿ…

ದೇವಾಲಯ ನಿರ್ಮಾಣವಾಗಿದ್ದು ಯಾವಾಗ?
ಗಾಳಿ ಆಂಜನೇಯ ಸ್ವಾಮಿ ದೇವಾಲಯ ಸುಮಾರು 600 ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿದೆ.

ಸ್ಥಳ ಪುರಾಣ:
ಬೆಂಗಳೂರು ನಗರದ ಮೈಸೂರು ರಸ್ತೆಯ ಬ್ಯಾಟರಾಯನಪುರದಲ್ಲಿರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಸುಮಾರು 600 ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿದೆ. ವೃಷಭಾವತಿ ಉಪನದಿಯ ಸಂಗಮ ಸ್ಥಳದಲ್ಲಿ ಪಶ್ಚಿಮಾಭಿಮುಖವಾಗಿ ಮೂರ್ತಿ ಸ್ಥಾಪಿಸಲಾಗಿದೆ. ಸ್ವಾಮಿಯ ಮೂರ್ತಿಯನ್ನು ವೇದವ್ಯಾಸರು ಸ್ಥಾಪಿಸಿದರು ಎಂಬ ಪ್ರತೀತಿ ಇದೆ. ದುಷ್ಟಶಕ್ತಿಗಳಿಂದ ರಕ್ಷಿಸಲು ದೇವರ ಮೂರ್ತಿಯನ್ನು ಸ್ಥಾಪಿಸಲಾಯಿತು ಎಂದು ಇತಿಹಾಸ ಹೇಳುತ್ತದೆ.

ಗಾಳಿ ಆಂಜನೇಯ ಎಂಬ ಹೆಸರು ಬಂದಿದ್ದು ಹೀಗೆ:
ಬೆಂಗಳೂರು ನಗರ ಉದಯಿಸುವ ಮುನ್ನ ಸ್ವಾಮಿಯ ಮೂರ್ತಿ ಬಯಲಿನಲ್ಲಿ ಇದ್ದ ಕಾರಣ ’ಗಾಳಿ’ ಆಂಜನೇಯ ಎಂಬ ಹೆಸರು ಬಂದಿದೆ. ’ಘಾಳಿ’ ಆಂಜನೇಯ ಎಂಬ ಹೆಸರೂ ಇದೆ. ’ಘಾಳಿ’ ಎಂದರೆ ದುಷ್ಟ ಶಕ್ತಿ ಎಂದರ್ಥ. ದುಷ್ಟ ಶಕ್ತಿಗಳ ಅಧಿಪತಿಯಾದ ರಾವಣನ ಪುತ್ರ ಅಕ್ಷಾಸುರನನ್ನು ಮೆಟ್ಟಿ ನಿಂತಿದ್ದರಿಂದ ಈ ಹೆಸರು ಬಂದಿದೆ. ಅಕ್ಷಾಸುರನ ಜಿತಾವಣೆಯಿಂದ ಭೂ ಲೋಕದಲ್ಲಿ ದೆವ್ವ, ಭೂತ ಚೇಷ್ಟೆಗಳು ಮಿತಿ ಮೀರಿದ್ದವಂತೆ. ಆಗ ಶ್ರೀ ರಾಮಚಂದ್ರನ ಆಣತಿಯಂತೆ ಹನುಮಂತ, ಅಕ್ಷಾಸುರನನ್ನು ಸದೆಬಡಿದು ಕಾಲಿನಡಿ ಮೆಟ್ಟಿ ನಿಂತ ಎಂದು ರಾಮಾಯಣದಲ್ಲಿ ಉಲ್ಲೇಖವಿದೆ.

ದೇವಾಲಯದಲ್ಲಿರುವ ಪೂಜಾ ಮೂರ್ತಿಯ ವಿಶೇಷತೆ:
ದೇವಾಲಯದ ಪೂಜಾ ಮೂರ್ತಿಯೂ ಇದೇ ಕತೆಯನ್ನು ಸಾರಿ ಹೇಳುವಂತಿದೆ. ಮೂರ್ತಿಯ ಶಿರದ ಎರಡೂ ಬದಿಯಲ್ಲಿ ಶಂಖ, ಚಕ್ರಗಳಿವೆ. ಸ್ವಾಮಿಯ ಬಾಲದಲ್ಲಿ ಗಂಟೆ ಇರುವುದು ಮತ್ತೊಂದು ವಿಶೇಷ. ಆಂಜನೇಯನ ಬಹುತೇಕ ಬಹುತೇಕ ವಿಗ್ರಹಗಳಲ್ಲಿ ಕೈಯಲ್ಲಿ ಗದೆ ಇರುತ್ತದೆ. ಆದರೆ ಇಲ್ಲಿ ಪದ್ಮಕಮಲವಿರುವುದು ಮತ್ತೊಂದು ವಿಶೇಷತೆಯಾಗಿದೆ.

ಗಾಳಿ ಆಂಜನೇಯನಿಗೆ ವಿಶೇಷ ಪೂಜೆ ಹಾಗೂ ವಿಶೇಷ ಅಲಂಕಾರದ ಬಗ್ಗೆ:
ಸಿಂಧೂರಲೇಪನ: ಆಂಜನೇಯನ ಬಹುತೇಕ ದೇಗುಲದಲ್ಲಿ ಮೂರ್ತಿಯ ಮುಖಕ್ಕೆ ಮಾತ್ರ ಸಿಂಧೂರ (ಭಂಡಾರ) ಲೇಪಿಸಲಾಗಿರುತ್ತದೆ. ಆದರೆ ಇಲ್ಲಿ ಪ್ರತಿ ಗುರುವಾರ ಸ್ವಾಮಿಯ ಇಡೀ ಮೈಗೆ ಸಿಂಧೂರ ಲೇಪಿಸಿ ಪೂಜೆ ಮಾಡಲಾಗುತ್ತದೆ. ಉಳಿದಂತೆ ಪ್ರತಿ ಮಂಗಳವಾರ ಮತ್ತು ಶನಿವಾರ ವಿಶೇಷ ಪೂಜೆ ನಡೆಯುತ್ತದೆ.

ಇಲ್ಲಿ ನಡೆಯುವ ಪ್ರಮುಖ ಉತ್ಸವ ಹಾಗೂ ರಥೋತ್ಸವದ ಬಗ್ಗೆ:
ಬ್ರಹ್ಮರಥೋತ್ಸವ 135 ವರ್ಷಗಳಿಂದ ಶ್ರೀರಾಮನವಮಿ ಸಂದರ್ಭದಲ್ಲಿ ಒಂಬತ್ತು ದಿನಗಳ ಕಾಲ ಶ್ರೀಪಾಂಚರಾತ್ರಾಗಮ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯುತ್ತದೆ. ಬೆಂಗಳೂರು ಕರಗದೊಂದಿಗೆ ಈ ಉತ್ಸವವವೂ ಮುಕ್ತಾಯವಾಗುತ್ತದೆ. ಹನುಮ ಜಯಂತಿ ಹಾಗೂ ಭೀಮನ ಅಮಾವಾಸ್ಯೆಯಂದು ವಿಶೇಷ ಪೂಜೆ ನಡೆಯುತ್ತದೆ. ಪ್ರತಿ ಪೌರ್ಣಮಿಯಂದು ಶ್ರೀ ಸತ್ಯನಾರಾಯಣ ವಿಶೇಷ ಪೂಜೆ ನಡೆಯುತ್ತದೆ. ವರ್ಷಕ್ಕೊಮ್ಮೆ ಚೈತ್ರ ಶುದ್ಧ ನವಮಿಯಲ್ಲಿ ಜಾತ್ರೆ ನಡೆಯುತ್ತದೆ. ಅಲ್ಲದೆ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಒಂದು ತಿಂಗಳ ಕಾಲ ವಿಶೇಷ ಪೂಜೆ ನಡೆಯಲಿದ್ದು, ಈ ವೇಳೆ ಭಕ್ತರು ಮಾಲೆ ಧರಿಸಿ ಭಜನೆ ಮಾಡುತ್ತಾರೆ. ಸಂಕ್ರಾಂತಿ ಸಂದರ್ಭ ಸುಮಾರು 300 ಕೆಜಿ ಪುಳಿಯೋಗರೆ ತಯಾರಿಸಿ ದೇವರ ಮುಂದೆ ರಾಶಿಹಾಕಿ ನೈವೇದ್ಯ ಮಾಡಿ ಭಕ್ತರಿಗೆ ಪ್ರಸಾದ ನೀಡಲಾಗುತ್ತದೆ.

ದೇವಾಲಯದಲ್ಲಿರುವ ಸಾನ್ನಿಧ್ಯ ಬಗ್ಗೆ:
ಸೀತಾರಾಮರ ಗುಡಿ ದೇವಾಲಯ ಪ್ರವೇಶಿಸುತ್ತಲೆ ಎಡ ಭಾಗಕ್ಕೆ ಪೂರ್ವಾಭಿಮುಖವಾಗಿ ಸೀತಾ, ಲಕ್ಷ್ಮಣ ಸಮೇತ ಶ್ರೀ ರಾಮಚಂದ್ರ ಸ್ವಾಮಿ, ಬಲಭಾಗಕ್ಕೆ ಸತ್ಯನಾರಾಯಣ ಸ್ವಾಮಿ ಮೂರ್ತಿ ಗುಡಿ ಇದೆ. ಈ ಎರಡೂ ಗುಡಿಗಳ ಮಧ್ಯಭಾಗದಲ್ಲಿ ಪಶ್ಚಿಮಾಭಿಮುಖವಾಗಿ ಆಂಜನೇಯ ಸ್ವಾಮಿ ಇದೆ. 1995ರಲ್ಲಿ ಸ್ಥಾಪನೆಯಾದ 75 ಅಡಿಯಷ್ಟು ಎತ್ತರದ ಅತ್ಯಾಕರ್ಷಕ ರಾಜಗೋಪುರ ದೇವಾಲಯಕ್ಕೆ ಮೆರುಗು ತಂದಿದೆ. ಮುಂಭಾಗದಲ್ಲೇ ನವಗ್ರಹ ಮೂರ್ತಿಗಳ ಗುಡಿಯಿದೆ. 1985ರಿಂದ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಟ್ರಸ್ಟ್‌ನಡಿ ದೇವಸ್ಥಾನದ ಧಾರ್ಮಿಕ ಕಾರ್ಯಗಳು ನಡೆಯುತ್ತಿದೆ.

ವಾಯುಪುತ್ರ ಆಂಜನೇಯ ವಾಯುದೇವನ ಪುತ್ರ. ತಂದೆ(ವಾಯು-ಗಾಳಿ) ಹೆಸರು ತಳಕು ಹಾಕಿಕೊಂಡಿರುವುದು ಇಲ್ಲಿ ಮಾತ್ರ ಎನ್ನಲಾಗುತ್ತಿದೆ.

ಯಂತ್ರ ಕಟ್ಟಿಸಿಕೊಳ್ಳುವುದರ ಬಗ್ಗೆ :
ಪ್ರತಿ ದಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 4 ರಿಂದ ರಾತ್ರಿ 9ರವರೆಗೆ ಪೂಜೆ. ಗಾಳಿ ಆಂಜನೇಯ ಸ್ವಾಮಿ ದೇವಾಲಯ ಹಲವು ವಿಶೇಷತೆಗಳಿಂದ ಸಹಸ್ರಾರು ಭಕ್ತರನ್ನು ಹೊಂದಿದೆ. ಕಷ್ಟ ನಿವಾರಣೆಗೆ ಹಲವರು ಹರಕೆ ಹೊರುತ್ತಾರೆ. ದುಷ್ಟಶಕ್ತಿಯಿಂದ ಆತಂಕ ಹೊಂದಿರುವವರು ಇಲ್ಲಿಗೆ ಬಂದು ಸ್ವಾಮಿಯ ಸೇವೆ ಮಾಡಿ ಯಂತ್ರ ಕಟ್ಟಿಸಿಕೊಳ್ಳುತ್ತಾರೆ.

ಇಲ್ಲಿ ದೇವರಿಗೆ ಶ್ರೇಷ್ಠವಾದುದು:
ವಡೆ ಹಾಗೂ ತುಳಸಿ ಹಾರ ದೇವರಿಗೆ ಶ್ರೇಷ್ಠ ಎಂಬ ನಂಬಿಕೆ ಇದೆ.

ಎಲ್ಲಿದೆ ಈ ಗಾಳಿ ಆಂಜನೇಯ ಸ್ವಾಮಿ ದೇವಾಲಯ?
ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಾಲಯ, ಬ್ಯಾಟರಾಯನಪುರ, ಮೈಸೂರು ರಸ್ತೆ, ಬೆಂಗಳೂರು

ಪೂಜಾ ಸಮಯ:
ಪ್ರತಿ ದಿನ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಹಾಗೂ ಸಂಜೆ 4 ರಿಂದ ರಾತ್ರಿ 9ರವರೆಗೆ

Tags: Hindu TempleKannada ArticleShri Gali Anjaneyaswamy templeTempleಗಾಳಿ ಆಂಜನೇಯ ಸ್ವಾಮಿದೇವಾಲಯಬೆಂಗಳೂರುಶ್ರೀ ಸೀತಾರಾಮರ ಗುಡಿ
Share197Tweet123Send
Previous Post

ಶ್ರೀ ಕ್ಷೇತ್ರ ಭವಾನಿಶಂಕರ ದೇವಾಲಯದಲ್ಲಿ ಮಹಾ ಚಂಡಿಕಾಹೋಮ

Next Post

ಜಮ್ಮು ಕಾಶ್ಮೀರ ವಿಶೇಷ ಸ್ಥಾನ ರದ್ದು? 40 ಸಾವಿರ ಯೋಧರ ನಿಯೋಜನೆ, ಅಮರನಾಥ ಯಾತ್ರೆ ಮೊಟಕು ಏಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಮ್ಮು ಕಾಶ್ಮೀರ ವಿಶೇಷ ಸ್ಥಾನ ರದ್ದು? 40 ಸಾವಿರ ಯೋಧರ ನಿಯೋಜನೆ, ಅಮರನಾಥ ಯಾತ್ರೆ ಮೊಟಕು ಏಕೆ?

ಜಮ್ಮು ಕಾಶ್ಮೀರ ವಿಶೇಷ ಸ್ಥಾನ ರದ್ದು? 40 ಸಾವಿರ ಯೋಧರ ನಿಯೋಜನೆ, ಅಮರನಾಥ ಯಾತ್ರೆ ಮೊಟಕು ಏಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL