ಬೈಂದೂರು: ಸರಳ ಹಾಗೂ ಜನಪ್ರಿಯ ಶಾಸಕರೆಂದೇ ಕರಾವಳಿ ಭಾಗದಲ್ಲಿ ಖ್ಯಾತರಾಗಿರುವ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಜನರ ಸಮಸ್ಯೆ ಪರಿಹಾರಕ್ಕೆ ಗ್ರಾಮ ಪಂಚಾಯ್ತಿ ಹಂತದಲ್ಲೇ ಸಭೆ ನಡೆಸಿರುವುದು ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.
ಅಂಪಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮ ಅಂಪಾರು ಸಮುದಾಯ ಭವನದಲ್ಲಿ ಬೈಂದೂರು ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶಾಸಕನಾಗಿ ಪಕ್ಷಾತೀತವಾಗಿ, ಜಾತ್ಯತೀತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನನ್ನ ಕರ್ತವ್ಯ ಎಂದರು. ಜನರ ಅಹವಾಲು ಸ್ವೀಕರಿಸಿ ಮಾತನಾಡಿದ ಶಾಸಕರು, ಆದಷ್ಟು ಬೇಗ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಕ್ತ ಕ್ರಮ ವಹಿಸುವಂತೆ ಆಗ್ರಹಿಸಿದರು. ಒಂದು ವಾರದಲ್ಲಿ ಗ್ರಾಮಸ್ಥರಿಗೆ ಅಗತ್ಯ ಮಾಹಿತಿ ನೀಡಿ ಅವರ ದಾಖಲೆಗಳನ್ನು ಪರಿಶೀಲಿಸಿ ಅವರ ಕಷ್ಟ ಪರಿಹರಿಸಬೇಕು. ಒಂದು ಕೆಲಸಕ್ಕೆ ಹತ್ತಾರು ಬಾರಿ ಅಲೆದಾಡಿಸುವಂತೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಅರ್ಹ ಫಲನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳನ್ನು ಸೇರಿಸಿ ಸ್ಥಳೀಯ ಜನರ ಸಮಸ್ಯೆಗಳಿಗೆ ಗ್ರಾಮ ಪಂಚಾಯತ್ ಹಂತದಲ್ಲಿ ಸಭೆ ನಡೆಸಿದ ಶಾಸಕರ ಯೋಚನೆಗೆ, ಯೋಜನೆಗೆ ಸ್ಥಳೀಯರು ಹರ್ಷ ವ್ಯಕ್ತಪಡಿಸಿದರು.
Discussion about this post