No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2019
in Small Bytes, ಚಿತ್ರದುರ್ಗ
0
ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?
Share on FacebookShare on TwitterShare on WhatsApp

ಚಿತ್ರದುರ್ಗ: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರದಂದು ಅಚ್ಚುಕಟ್ಟಾಗಿ ನೆರವೇರಿತು.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾನ ಸಹಾಯಕರು ಸೇರಿದಂತೆ ಒಟ್ಟು 1304 ಸಿಬ್ಬಂದಿಗಳನ್ನು ಮತದಾನ ಪ್ರಕ್ರಿಯೆ ಕೈಗೊಳ್ಳುವ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದಲೇ ಚಿತ್ರದುರ್ಗದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಆವರಣದಲ್ಲಿ ಹಬ್ಬದ ಸಂಭ್ರಮ ಪ್ರಾರಂಭವಾಯಿತು. ಬೆಳಿಗ್ಗೆ 8 ಗಂಟೆಯ ಹೊತ್ತಿಗೆ ಮತಗಟ್ಟೆಗಳಿಗೆ ನೇಮಕಗೊಂಡಿರುವ ಅಧಿಕಾರಿ, ಸಿಬ್ಬಂದಿಗಳು ಕಾಲೇಜು ಆವರಣದಲ್ಲಿ ಸೇರತೊಡಗಿದರು. ಇದರ ಜೊತೆಗೆ ಚುನಾವಣೆ ಕಾರ್ಯ ಹಾಗೂ ಮತಗಟ್ಟೆಯ ಬಂದೋಬಸ್ತ್‌ಗಾಗಿ ನಿಯೋಜಿತಗೊಂಡಿರುವ ಪೊಲೀಸರು ಕೂಡ ಆಗಮಿಸಿದ್ದರು.

ಮತದಾನ ಪ್ರಕ್ರಿಯೆಗೆ ತೆರಳುವ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸರನ್ನು ಕರೆದುಕೊಂಡು ಹೋಗಲು ಬಸ್, ಕ್ರೂಸರ್ ಹಾಗೂ ಜೀಪ್‌ಗಳು ಕಾಲೇಜು ಆವರಣದಲ್ಲಿ ಸಾಲಾಗಿ ಜಮಾವಣೆಗೊಂಡಿದ್ದವು. ಚಿತ್ರದುರ್ಗ ಕ್ಷೇತ್ರದಲ್ಲಿ ಇದಕ್ಕಾಗಿ 57 ಮಾರ್ಗಗಳನ್ನು ಗುರುತಿಸಿ, 45 ಬಸ್‌ಗಳು, 12 ಮಿನಿಬಸ್ ಹಾಗೂ 03 ಮ್ಯಾಕ್ಸಿಕ್ಯಾಬ್/ ಜೀಪ್‌ಗಳನ್ನು ಬಳಕೆ ಮಾಡಲಾಗಿದೆ. ಕಾಲೇಜು ಆವರಣದಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ತಾವು ತೆರಳಬೇಕಿರುವ ಮತಗಟ್ಟೆಯ ವಿವರ ಹಾಗೂ ಬಸ್’ಗಳ ವಿವರವನ್ನು ಧ್ವನಿವರ್ಧಕ ಮೂಲಕ ತಿಳಿಸುವ ವ್ಯವಸ್ಥೆ ಮಾಡಲಾಗಿತ್ತು.

ಇನ್ನೊಂದೆಡೆ, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣಾ ಸಾಮಗ್ರಿ, ಇವಿಎಂ ಯಂತ್ರಗಳ ಪೆಟ್ಟಿಗೆ, ವಿವಿ ಪ್ಯಾಟ್ ಯಂತ್ರದ ಪೆಟ್ಟಿಗೆ ಹಾಗೂ ವಿಶೇಷ ಕಿಟ್ ಬ್ಯಾಗ್ ಅನ್ನು ವಿತರಿಸಲು ಸೆಕ್ಟರ್‌ವಾರು ಕೊಠಡಿಗಳನ್ನು ಸ್ಥಾಪಿಸಿ, ಆ ಮೂಲಕ ಸಂಬಂಧಪಟ್ಟ ಮತಗಟ್ಟೆಗಳ ಸಿಬ್ಬಂದಿಗೆ ಚುನಾವಣಾ ಸಾಮಗ್ರಿ ವಿತರಿಸುವ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಲಾಯಿತು. ಯಾವುದೇ ಅಧಿಕಾರಿ, ಸಿಬ್ಬಂದಿಗಳಿಗೆ ಗೊಂದಲಕ್ಕೆ ಆಸ್ಪದವಿಲ್ಲದಂತೆ, ಮಸ್ಟರಿಂಗ್ ಕಾರ್ಯಕ್ಕೆ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಕೈಗೊಳ್ಳಲಾಯಿತು.

ಸ್ಥೈರ್ಯ ತುಂಬಿದ ಡಿಸಿ
ಚಿತ್ರದುರ್ಗದಲ್ಲಿ ಮಸ್ಟರಿಂಗ್ ಕಾರ್ಯ ಜರುಗಿದ ಕಾಲೇಜು ಆವರಣಕ್ಕೆ ಬೆಳಿಗ್ಗೆಯೇ ಆಗಮಿಸಿದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು, ಮಸ್ಟರಿಂಗ್ ಕಾರ್ಯದ ಸಮಗ್ರ ವಿವರವನ್ನು ಪಡೆದುಕೊಂಡರು, ಚುನಾವಣಾ ಸಾಮಗ್ರಿಯನ್ನು ಜೋಡಿಸಿಕೊಳ್ಳಲು ಸಿಬ್ಬಂದಿಗಳಿಗೆ ಕೊಠಡಿಗಳಲ್ಲಿ ಅವಕಾಶ ಕಲ್ಪಿಸಲಾಗಿತ್ತು. ಈ ಕೊಠಡಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಮಾತನಾಡಿ, ಯಾವುದೇ ಆತಂಕವಿಲ್ಲದೆ, ಧೈರ್ಯದಿಂದ ಹಾಗೂ ಪ್ರಾಮಾಣಿಕತೆಯಿಂದ ಚುನಾವಣಾ ಕರ್ತವ್ಯ ನಿರ್ವಹಿಸುವಂತೆ ನೈತಿಕ ಸ್ಥೈರ್ಯ ತುಂಬಿದರು.

ಪರಿಸರ ಸ್ನೇಹಿ ಸಾಮಗ್ರಿ ಬಳಕೆ
ಈ ಬಾರಿಯ ಚುನಾವಣೆಯಲ್ಲಿ ಮತಗಟ್ಟೆಗೆ ಸಾಗಿಸಬೇಕಾದ ಸಾಮಗ್ರಿಗಳನ್ನು ನೀಡಲು ಯಾವುದೇ ಪ್ಲಾಸ್ಟಿಕ್ ಬ್ಯಾಗ್‌ಗಳನ್ನು ಬಳಸದೆ, ಬಟ್ಟೆಯ ಬ್ಯಾಗ್, ಪೇಪರ್ ಕವರ್‌ಗಳನ್ನು ಮಾತ್ರ ಬಳಸುವ ಮೂಲಕ ಮತಗಟ್ಟೆಯನ್ನು ಪರಿಸರ ಸ್ನೇಹಿಯನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆ. ವಿ.ವಿ. ಪ್ಯಾಟ್ ಯಂತ್ರ ಹಾಗೂ ವಿದ್ಯುನ್ಮಾನ ಮತಯಂತ್ರಗಳಿಗೆ ಆದಷ್ಟು ಬಿಸಿಯ ತಾಪದಿಂದ ರಕ್ಷಿಸುವ ರೀತಿ ಕ್ರಮ ಕೈಗೊಳ್ಳುವಂತೆ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಆದರೆ ಮತದಾನ ಗೌಪ್ಯತೆ ಕಾಪಾಡುವ ರೀತಿ ಕಿಟಕಿಗಳ ಮೂಲಕ ಮತದಾನ ಪ್ರಕ್ರಿಯೆ ಕಾಣದಂತೆ ವ್ಯವಸ್ಥೆಗೊಳಿಸಲು ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಥಮ ಚಿಕಿತ್ಸಾ ಕಿಟ್
ಸದ್ಯ ಬಿರು ಬೇಸಿಗೆ ಇರುವುದರಿಂದ, ಮತದಾನ ಕರ್ತವ್ಯಕ್ಕೆ ನಿಯೋಜಿತಗೊಂಡಿರುವ ಸಿಬ್ಬಂದಿಗಳ ಆರೋಗ್ಯ ರಕ್ಷಣೆಯತ್ತಲೂ ಕಾಳಜಿ ವಹಿಸಲಾಗಿದ್ದು, ಈ ಬಾರಿ ಎಲ್ಲ ಮತಗಟ್ಟೆಗಳಿಗೂ ಪ್ರಥಮ ಚಿಕಿತ್ಸಾ ಕಿಟ್, ಬಿಸ್ಕೆಟ್ ಪಾಕೆಟ್, ಕುಡಿಯುವ ನೀರಿನ ವ್ಯವಸ್ಥೆ, ಜೀವ ರಕ್ಷಕ ಔಷಧಿಗಳು ಹಾಗೂ ಓಆರ್’ಎಸ್ ಪಾಕೆಟ್’ಗಳನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ. ಅಲ್ಲದೆ ತುರ್ತು ಸಂದರ್ಭದಲ್ಲಿ ವೈದ್ಯರ ಲಭ್ಯತೆ ಇರುವಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅಚ್ಚುಕಟ್ಟಾದ ವ್ಯವಸ್ಥೆ
ಚಿತ್ರದುರ್ಗದ ಬಾಲಕರ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ಏರ್ಪಡಿಸಲಾದ ಮಸ್ಟರಿಂಗ್ ಕಾರ್ಯ ಯಶಸ್ವಿಯಾಗಿ, ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ನೆರವೇರಿಸಲು ಪೂರ್ವಭಾವಿಯಾಗಿ ಯೋಜನೆ ರೂಪಿಸಿ, ಅದರಂತೆಯೇ ಕಾರ್ಯಗತಗೊಳಿಸಲಾಯಿತು. ಚುನಾವಣಾ ಸಾಮಗ್ರಿ ವಿತರಣೆ, ಮತಯಂತ್ರಗಳ ವಿತರಣೆ, ಚುನಾವಣೆಗೆ ಮತಗಟ್ಟೆಗಳಿಗೆ ನಿಯೋಜನೆ, ಅನಿವಾರ್ಯ ಕಾರಣಗಳಿಗಾಗಿ ಕರ್ತವ್ಯದಲ್ಲಿ ಬದಲಾವಣೆ ಬಯಸಿದವರಿಗೂ, ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಪರ್ಯಾಯವಾಗಿ ಕಾಯ್ದರಿಸಿದ ಸಿಬ್ಬಂದಿಗಳಿಗೆ ಕರ್ತವ್ಯ ನಿಯೋಜಿಸುವ ಕಾರ್ಯವೂ ವ್ಯವಸ್ಥಿತವಾಗಿತ್ತು.

ಚುನಾವಣಾ ಕರ್ತವ್ಯಕ್ಕೆ ತೆರಳಲು ಆಗಮಿಸಿದ್ದ ಅಧಿಕಾರಿ, ಸಿಬ್ಬಂದಿಗಳಿಗೆ ಕಾಲೇಜು ಆವರಣದಲ್ಲಿ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಕೈಗೊಳ್ಳಲಾಯಿತು. ಮತಗಟ್ಟೆಗಳತ್ತ ತೆರಳುವ ಮುನ್ನ ಮಧ್ಯಾಹ್ನದ ಊಟ ಪೂರೈಸಿಕೊಂಡು ಹೋಗುವ ರೀತಿ ವ್ಯವಸ್ಥೆ ಮಾಡಲಾಯಿತು. ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಹಲವು ಅಧಿಕಾರಿ, ಸಿಬ್ಬಂದಿಗಳೂ ಕೂಡ ಮಸ್ಟರಿಂಗ್ ಕಾರ್ಯಕ್ಕೆ ಕೈಗೊಂಡ ವ್ಯವಸ್ಥೆ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.

ಚಿತ್ರದುರ್ಗ ಸಹಾಯಕ ಚುನಾವಣಾಧಿಕಾರಿ ವಿಜಯಕುಮಾರ್ ಅವರು ಮಸ್ಟರಿಂಗ್ ಕಾರ್ಯದ ನೇತೃತ್ವ ವಹಿಸಿದ್ದರೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣೆ ಸಿಬ್ಬಂದಿಗಳ ನಿಯೋಜನೆಯ ಮೇಲುಸ್ತುವಾರಿಯನ್ನು ವಹಿಸಿದ್ದರು.
(ಸುರೇಶ್ ಬೆಳಗೆರೆ, ಚಿತ್ರದುರ್ಗ)

Tags: Bayalusime NewsChitradurgaKannada NewsLok Sabha election 2019ಚಿತ್ರದುರ್ಗಲೋಕಸಭೆ ಚುನಾವಣೆ 2019
Share196Tweet123Send
Previous Post

ಕರ್ತವ್ಯದಲ್ಲಿದ್ದ ಸೇನಾ ಸಿಬ್ಬಂದಿಗಳ ವಿರುದ್ಧ ಎಫ್’ಐಆರ್ ದಾಖಲಿಗೆ ಚುನಾವಣಾಧಿಕಾರಿ ಮನವಿ

Next Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಬೈಂದೂರಿನ ಕಡಲತೀರದ ಮಂದಿ ಯಾರಿಗೆ ಒಲಿಯಲಿದ್ದಾರೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಬೈಂದೂರಿನ ಕಡಲತೀರದ ಮಂದಿ ಯಾರಿಗೆ ಒಲಿಯಲಿದ್ದಾರೆ ಗೊತ್ತಾ?

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಬೈಂದೂರಿನ ಕಡಲತೀರದ ಮಂದಿ ಯಾರಿಗೆ ಒಲಿಯಲಿದ್ದಾರೆ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!