ಬೆಂಗಳೂರು: ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ರೈತರಿಗೆ ಬಂಪರ್ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ತಿಂಗಳಿಗೆ 2 ಸಾವಿರ ರೂಪಾಯಿಯಂತೆ ವಾರ್ಷಿಕ 6 ಸಾವಿರ ರೂಪಾಯಿ ನೀಡುತ್ತಿದೆ. ಈ ಯೋಜನೆಗೆ ರಾಜ್ಯ ಸರ್ಕಾರವೂ ಅನುದಾನ ನೀಡಲಿದ್ದು, 3 ಕಂತುಗಳಲ್ಲಿ ಒಟ್ಟಾರೆ 4 ಸಾವಿರ ರೂಪಾಯಿ ಹಣವನ್ನು ರೈತರ ಖಾತೆಗೆ ತಲುಪಲಿದೆ ಎಂದಿದ್ದಾರೆ.
ನೇಕಾರರ 100 ಕೋಟಿ ರೂಪಾಯಿ ಸಾಲ ಮನ್ನಾಕ್ಕೆ ಬಿಜೆಪಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.
Discussion about this post