ಕಲ್ಪ ಮೀಡಿಯಾ ಹೌಸ್ | ದೊಡ್ಡಬಳ್ಳಾಪುರ |
ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸವನ್ನು ರಫ್ತು ಮಾಡಲಾಗುತ್ತಿದ್ದ ಸುಮಾರು 7 ವಾಹನಗಳ ಮೇಲೆ ಶ್ರೀರಾಮಸೇನೆ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಇಲ್ಲಿನ ಟೋಲ್ ಬಳಿಯಲ್ಲಿ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಟೋಲ್ ಬಳಿಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿರುವುದನ್ನು ಕಂಡ ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬ ಇದನ್ನು ಪ್ರಶ್ನಿಸಿದ್ದಾನೆ. ಆದರೆ, ವಾಹನದಲ್ಲಿದ್ದರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ವೇಳೆ ವಿಷಯ ತಿಳಿದು ನೂರಾರು ಸಂಖ್ಯೆಯಲ್ಲಿ ಶ್ರೀರಾಮ ಸೇನೆಯ Shri rama Sena ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಸುಮಾರು 7 ವಾಹನಗಳಿಗೆ ತಡೆ ಹಾಕಿದ್ದಾರೆ.
Also read: ಗಣೇಶೋತ್ಸವದಲ್ಲಿನ ಚಂದ್ರಯಾನ-3ರ ಜರ್ನಿಯ ಅದ್ಬುತ ಮಾದರಿಗೆ ಜನರು ಫಿದಾ
ಈ ವಾಹನಗಳಲ್ಲಿ ಗೋಮಾಂಸವನ್ನು ಭಾರೀ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಹಿಂದೂಪುರರಿAದ ರಾಜ್ಯಕ್ಕೆ ಇದನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ.
ಈ ವೇಳೆ ಆಕ್ರೋಶ ವ್ಯಕ್ತಪಡಿಸಿರುವ ಶ್ರೀರಾಮ ಸೇನೆ ಕಾರ್ಯಕರ್ತರು ಟೋಲ್ ಬಳಿಯಲ್ಲಿ ಪೊಲೀಸರು ಇದ್ದರೂ ಸಹ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಸಾಗಾಟವನ್ನು ಯಾಕೆ ತಡೆಯಲ್ಲಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇನ್ನು, ಘಟನೆಯನ್ನು ಖಂಡಿಸಿದ ಸಾರ್ವಜನಿಕರು ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post