ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ನೆರೆ, ಇನ್ನೊಂದೆಡೆ ಬರ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಗಣ್ಯರು ಹಾಗೂ ಉದ್ಯಮಿಗಳು ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ಉಪೇಂದ್ರ ವೈಯಕ್ತಿಕವಾಗಿ ಐದು ಲಕ್ಷ ರೂ.ಗಳ ದೇಣಿಗೆ ನೀಡಿದ್ದು, ಇದರ ಚೆಕ್ ಅನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಸುಧಾಕರ್ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ಚೆಕ್ ದೇಣಿಗೆ ನೀಡಿದರು.ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ ಇಂದು 5 ಕೋಟಿ ರೂ.ಗಳ ಚೆಕ್ ನ್ನು ಮುಖ್ಯ ಮಂತ್ರಿ @BSYBJP ಅವರಿಗೆ ಹಸ್ತಾಂತರಿಸಿದರು. ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.ಟಿವಿಎಸ್ ಮೋಟಾರ್ಸ್ ಉಪಾಧ್ಯಕ್ಷ ವಿ.ಆರ್. ಕರುಣಾಕರ ರೆಡ್ಡಿ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಚೆಕ್ ಹಸ್ತಾಂತರಿಸಿದರು.
Discussion about this post