ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ವೈರುಧ್ಯಗಳು ಹೆಚ್ಚಾಗುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತದೆ ಎಂದು ಬಿಜೆಪಿ ಆರೋಪಿಸಿರುವ ಜೊತೆಯಲ್ಲಿ, ಸಿಆರ್’ಪಿಎಫ್ ಯೋಧರನ್ನು ನಿಯೋಜನೆ ಮಾಡಲು ಚುಣಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಈ ಕುರಿತಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವ ಬಿಜೆಪಿ, ಪಶ್ಚಿಮ ಬಂಗಾಳದ ಪೊಲೀಸರ ಮೇಲೆ ನಮಗೆ ನಂಬಿಕೆ ಇಲ್ಲ. ಆದ್ದರಿಂದ ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ಮತದಾನ ಪ್ರಕ್ರಿಯೆ ನಡೆಯಬೇಕೆಂದು ಮನವಿ ಮಾಡಿದ್ದಾರೆ.
ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮಾತನಾಡಿರುವ ಕೋಲ್ಕತ್ತಾ ಮೇಯರ್, ಚುನಾವಣೆ ಸಂದರ್ಭದಲ್ಲಿ ಕೇವಲ ಎರಡು ದಿನಗಳು ಮಾತ್ರ ಸಿಆರ್’ಪಿಎಫ್ ಪಡೆ ಮೇಲ್ವಿಚಾರಣೆ ನಡೆಸಲಿದೆ. ಉಳಿದ ದಿನಗಳಲ್ಲಿ ಜನರು ರಾಜ್ಯ ಪೋಲಿಸ್ ಪಡೆಯನ್ನೇ ಅವಲಂಬಿಸಬೇಕು ಎಂದಿದ್ದಾರೆ. ಈ ಮೂಲಕ ಜನರಿಗೆ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದೆ.
ಈ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಈಗ ಬಿಜೆಪಿ ಪಶ್ಚಿಮ ಬಂಗಾಳದಲ್ಲಿನ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪೊಲೀಸರನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಪೊಲೀಸರನ್ನು ಮುಂದಿಟ್ಟುಕೊಂಡು ಟಿಎಂಸಿ ಮತದಾರರಿಗೆ ಬೆದರಿಕೆ ಹಾಕುತ್ತಿದೆ. ಆದ್ದರಿಂದ ಮತದಾನ ಪ್ರಕ್ರಿಯೆ ಕೇಂದ್ರಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಯಲಿ. ಇದಕ್ಕಾಗಿ ನ್ಯಾಯೋಚಿತ ರೀತಿಯಲ್ಲಿ ಚುನಾವಣೆ ನಡೆಯಲು ಕೇಂದ್ರೀಯ ಸಶಸ್ತ್ರ ಪಡೆಗಳನ್ನು ನಿಯೋಜಿಸಿ ಎಂದು ಮನವಿ ಮಾಡಿದೆ.
Discussion about this post