ಮೈಸೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ನಟ ಸಾಹಸಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಹೊಸ ಅಡಚಣೆ ಉಂಟಾಗಿದೆ.
ಸ್ಮಾರಕ ನಿರ್ಮಾಣಕ್ಕೆ ಸರ್ಕಾರ 2017ರಲ್ಲಿ ಹಾಲಾಳು ಗ್ರಾಮದ ಮೈಸೂರ್ರುಮಾನಂದವಾಡಿ ರಸ್ತೆಯಲ್ಲಿ 5 ಎಕರೆ ಭೂಮಿ ಗುರುತಿಸಿತ್ತು. ಈ ಸಂಬಂಧ ಸರ್ಕಾರದ ನಿರ್ಧಾರ ಪ್ರಶ್ನಿಸಿ ರೈತರು ಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಸ್ಥಳೀಯ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಕೋರ್ಟ್‌ನಿಂದ ತಡೆಯಾಜ್ಞೆ ತಂದವರು ನಾಲ್ಕು ಬಾರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹೈಕೋರ್ಟ್, ತಡೆಯಾಜ್ಞೆ ತೆರವುಗೊಳಿಸಿ ಸ್ಮಾರಕ ನಿರ್ಮಾಣಕ್ಕೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜೂನ್ 1 ರಂದು ಸ್ಮಾರಕ ನಿರ್ಮಾಣ ಕಾರ್ಯ ಆರಂಭವಾಗಿತ್ತು.
ಈ ಹಿನ್ನೆಲೆಯಲ್ಲಿ ತಾಲೂಕಿನ ಜಯಪುರ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಗೊಂಡಿತ್ತು. ಆದರೆ, ಕಾಮಗಾರಿ ಆರಂಭವಾದ ನಂತರ ಸ್ಥಳಕ್ಕೆ ಆಗಮಿಸಿದ ಕೆಲವು ರೈತರು ಕಾಮಗಾರಿಗೆ ಅಡ್ಡಿಪಡಿಸಿದ್ದು, ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.






Discussion about this post