ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ದಾವಣಗೆರೆ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕು ಬೆಳವನೂರು ಗ್ರಾಮದ ಬಳಿ ನಡೆದಿದೆ.
ಸಿದ್ದೇಶ್(30) ಹಾಗೂ ಪ್ರಿಯಾಂಕಾ (3) ಮೃತ ದುರ್ದೈವಿಗಳು.
ತುರ್ಚುಘಟ್ಟ ಗ್ರಾಮದ ನಿವಾಸಿಗಳಾದ ಮೃತರು, ತುರ್ಚುಘಟ್ಟದಿಂದ ಸಂಬಂಧಿಕರ ಊರಿಗೆ ತೆರಳುತ್ತಿದ್ದರು. ಈ ವೇಳೆ ಎದುರುಗಡೆ ಬಂದ ಮತ್ತೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಂದು ಬೈಕಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get In Touch With Us info@kalpa.news Whatsapp: 9481252093
















