ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರಿ ನೌಕರರಿಗೆ ಇನ್ಮುಂದೆ ಡ್ರೆಸ್ ಕೋರ್ಡ್ ಕಡ್ಡಾಯ ಮಾಡಲು ಸರ್ಕಾರ ಮುಂದಾಗಿದೆ.
ಈ ಕುರಿತಂತೆ ವರದಿಯಾಗಿದ್ದು, ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಚರ್ಚೆಯಾಗಿದೆ. ಅಧಿಕೃತ ಆದೇಶಕ್ಕೆ ಮುನ್ನವೇ ಪರ ವಿರೋಧ ಚರ್ಚೆ ಆರಂಭವಾಗಿದೆ.
ಹೌದು… ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿ/ ನೌಕರರು ಪ್ರತಿ ತಿಂಗಳ ಮೊದಲ ಶುಕ್ರವಾರದಂದು ಖಾದಿ ಉಡುಪನ್ನು ಧರಿಸುವುದು, ಸ್ವಾತಂತ್ರ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಸೇರಿದಂತೆ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅಧಿಕಾರಿಗಳು / ಸಿಬ್ಬಂದಿ ಎಲ್ಲರೂ ಖಾದಿ ಉಡುಪನ್ನು ಧರಿಸುವ ಕುರಿತಂತೆ ಚರ್ಚಿಸಲಾಗಿದೆ.
ಇನ್ನು ಕರ್ನಾಟಕದಲ್ಲಿ ಸರ್ಕಾರಿ ನೌಕರರಿಗೆ ಖಾದಿ ಉಡುಪನ್ನು ಕಡ್ಡಾಯ ಮಾಡುವ ನಿಟ್ಟಿನಲ್ಲಿ ಸರ್ಕಾರವು ಚರ್ಚೆ ನಡೆಸುತ್ತಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆ ಶುರುವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















