ಕಲ್ಪ ಮೀಡಿಯಾ ಹೌಸ್ | ದುಬೈ |
ಭಾರತದ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ Italy PM Georgia Meloni ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಮೋದಿಯವರ ಕುರಿತಾಗಿ ಆತ್ಮೀಯತೆಯ ಮಾತನಾಡಿದ್ದಾರೆ.
ಸಿಓಪಿ 28 ಶೃಂಗಸಭೆಗೆ COP 28 Summit ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, `ಗುಡ್ ಫ್ರೆಂಡ್ಸ್ ಅಟ್ ಸಿಓಪಿ28 ಮೆಲೋಡಿ’ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮೆಲೋನಿ ಕಳೆದ ಸೆಪ್ಟೆಂಬರ್’ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು.
Also read: ಮಿಜೋರಾಂ ಚುನಾವಣೆ ಮತ ಎಣಿಕೆ ಡಿ.4ಕ್ಕೆ ಮುಂದೂಡಿಕೆ | ಕಾರಣವೇನು?
ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.











Discussion about this post