ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿಯೂ ಆಗಿರುವ ಅಬಕಾರಿ ಇಲಾಖೆಯ ಉನ್ನತ ಅಧಿಕಾರಿ ವೈ. ಮಂಜುನಾಥ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭಾರಿ ದಾಳಿ ನಡೆಸಿದ್ದಾರೆ.
ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಸೇರಿದ ಒಟ್ಟು 6 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪರಿಶೀಲನೆ ಕೈಗೊಂಡಿದೆ.
ಇಂದು ಬೆಳಿಗ್ಗೆ ಕಾರ್ಯಾಚರಣೆ ಆರಂಭಿಸಿದ ಇಡಿ ಅಧಿಕಾರಿಗಳು, ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ಮಂಜುನಾಥ್ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಗೋವಾ ಮತ್ತು ಬೆಂಗಳೂರಿನ ಇಡಿ ಅಧಿಕಾರಿಗಳ ಸಂಯುಕ್ತ ತಂಡ ಈ ದಾಳಿಯನ್ನು ನಡೆಸುತ್ತಿದೆ.
ದಾಳಿಯ ಹಿನ್ನೆಲೆ ಹಾಗೂ ಪತ್ತೆಯಾದ ಮಾಹಿತಿಗಳ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದ್ದು, ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Comments 1